

ಶಿವಮೊಗ್ಗ: ಕರ್ನಾಟಕದ ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಅಂಗವಾಗಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್‌ನ ಮುಖಂಡ ಎಚ್.ಪಿ.ಗಿರೀಶ್, ಗ್ಯಾರಂಟಿ ಪ್ರಾಧಿಕಾರದ ಸದಸ್ಯರಾದ ಎಸ್.ಕುಮಾರೇಶ್, ಬಸವರಾಜ್, ಯುವ ಕಾಂಗ್ರೆಸ್ ಪ್ರಮುಖರಾದ ಕೆ.ಎಲ್.ಪವನ್, ಗುರುಪ್ರಸಾದ್, ಎಸ್.ಜೆ.ಮಿಥುನ್, ಎಸ್.ಎಸ್.ಶರತ್, ರಾಹುಲ್ ಇದ್ದರು.