ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕನ ಕುಟುಂಬ: ದುಃಖದ ಮಧ್ಯೆಯೂ ಕಿಡ್ನಿ, ಲಿವರ್, ಹೃದಯ ದಾನ..!

brain dead
Published on

ಬೆಂಗಳೂರು: ಕೇವಲ ಒಂದು ಸಣ್ಣ ಆ್ಯಕ್ಸಿಡೆಂಟ್​ನಿಂದ ಯುವಕನ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಜಾಜಿನಗರ ಕ್ಷೇತ್ರದ ಬಸವೇಶ್ವರ ನಗರದ ಭೋವಿ ಕಾಲೋನಿಯ ರೋಹಿತ್(26) ಮೃತ ದುರ್ದೈವಿಯಾಗಿದ್ದು, ಒಂದು ವಾರ ಸಾವು ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಹೋರಾಟ ಮಾಡುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ನಿನ್ನೆ ಸಾಯಂಕಾಲ ಬ್ರೈನ್ ಡೆಡ್ ಎಂದು ವೈದ್ಯರು ಘೋಷಿಸಿದ್ದಾರೆ.

ಇನ್ನು, ಯುವಕ ಮೆದುಳು ನಿಷ್ಕ್ರಿಯಗೊಂಡು ಸಾವಿನ ಮನೆಯ ಕದ ತಟ್ಟಿದ್ದು, ಆತನ ಕುಟುಂಬಸ್ಥರು ಸಾರ್ಥಕತೆ ಮೆರೆದು ಯುವಕನ ಕಣ್ಣು, ಕಿಡ್ನಿ, ಲಿವರ್, ಲಂಗ್ಸ್ ಹಾಗೂ ಹೃದಯವನ್ನು ದಾನ ಮಾಡಿದ್ದಾರೆ. ಅಂಗಾಂಗಗಳ ದಾನದ ಮೂಲಕ ಮೃತ ರೋಹಿತ್ ಇನ್ನೊಬ್ಬರ ಬಾಳಿಗೆ ಬೆಳಕಾಗಿದ್ದಾನೆ.

ಘಟನೆ ಹಿನ್ನೆಲೆ:
ಕಳೆದ ಭಾನುವಾರದಂದು ಎರಡು ಬೈಕ್​ಗಳ ನಡುವೆ ಆ್ಯಕ್ಸಿಡೆಂಟ್ ಸಂಭವಿಸಿತ್ತು. ತದನಂತರ ರೋಹಿತ್​ನನ್ನು ವಿಜಯನಗರ ಆಸ್ಪತ್ರೆಗೆ ದಾಖಲಿಸಿ 8 ದಿನಗಳ ನಿರಂತರ ಚಿಕಿತ್ಸೆ ನೀಡಲಾಗಿತ್ತು. ಆದರೆ ವಿಜಯನಗರ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಯುವಕನನ್ನು ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಬ್ರೈನ್ ಡೆಡ್ ಆಗಿದೆ ಎಂದು ಘೋಷಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net