ಯುವಜನೋತ್ಸವದಲ್ಲಿ ವಿವಿಧ ವಿಭಾಗದಲ್ಲಿ ಗೆದ್ದ ವಿದ್ಯಾರ್ಥಿಗಳು

30-RNR-04
Published on

ರಾಣೆಬೆನ್ನೂರ: ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ರಂಭಾಪುರಿ ಜಗದ್ಗುರು ವೀರ ಗಂಗಾಧರ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕರ್ನಾಟಕ ವಿಶ್ವವಿದ್ಯಾಲಯದ ವಲಯ ಮಟ್ಟದ ಯುವಜನೋತ್ಸವದಲ್ಲಿ ತಾಲೂಕಿನ ಸುಣಕಲ್ಲಬಿದರಿ ಅರಳಿ ಶಿದ್ಲಿಂಗಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ವಿವಿಧ ವಿಭಾಗದಲ್ಲಿ ವಿಜೇತರಾಗಿದ್ದಾರೆ.
ಸಮೂಹ ಗಾಯನ ಮತ್ತು ಮಿಮಿಕ್ರಿಯಲ್ಲಿ ಪ್ರಥಮ ಸ್ಥಾನ, ಇನ್ಸ್ಟಾಲೇಶನ್‌ದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜ್‌ನ ಪ್ರಾಚಾರ್ಯ ಆರ್. ಎಫ್. ಅಯ್ಯನಗೌಡ್ರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net