ಯುವ ನಾಯಕತ್ವ ಸಮಾವೇಶ 6ಕ್ಕೆ

Harshith gowda
Published on

ಶಿವಮೊಗ್ಗ: ನಗರದ ಬಾಲರಾಜ ಅರಸ್ ರಸ್ತೆಯ ಬಂಜಾರ ಕನ್ವೆನ್ಷನ್ ಹಾಲ್‌ನಲ್ಲಿ ಮೇ 6ರ ಬೆಳಗ್ಗೆ 11ಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಯುವ ನಾಯಕತ್ವ ಸಮಾವೇಶ ಹಾಗೂ ಜಿಲ್ಲಾ ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಹರ್ಷಿತ್ ಗೌಡ ತಿಳಿಸಿದರು.

ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಮೂರು ಸಾವಿರಕ್ಕೂ ಅಧಿಕ ಯುವಕರು ಭಾಗವಹಿಸುವರು. ಯುವ ನಾಯಕತ್ವದ ಕುರಿತು ಮಾರ್ಗದರ್ಶನ ನೀಡುವ ಜತೆಗೆ ಪಕ್ಷ ಸಂಘಟನೆ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸುವುದೂ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾರಂಭದಲ್ಲಿ ಚರ್ಚಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಾಜಿ ಸಂಸದ ಡಿ.ಕೆ.ಸುರೇಶ್ ದಿಕ್ಸೂಚಿ ಭಾಷಣ ಮಾಡುವರು. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾರ್ಗದರ್ಶನ ನೀಡುವರು. ಯುವ ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನೂತನ ಪದಾಧಿಕಾರಿಗಳಿಗೆ ಧ್ವಜ ಹಸ್ತಾಂತರ ಮಾಡುವರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್ ಪ್ರಮಾಣ ವಚನ ಹಾಗೂ ಸಂವಿಧಾನದ ಪೀಠಿಕೆ ಬೋಧಿಸುವರು ಎಂದರು.

ಪ್ರಮುಖರಾದ ಮಧುಸೂದನ್, ಚೇತನ್, ಬಾಲಾಜಿ, ನಾಗರಾಜ್, ರವಿ, ವಿಜಯಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net