Video Viral: ದೇವರ ವಿಗ್ರಹದ ಬಾಯಿಗೆ ಸಿಗರೇಟ್ ಇಟ್ಟ ಯುವಕ!

Youth Offer Cigarettes To Lord Kaal Bhairav In Jabalpur Temple
Published on

Video Viral:  ದೇವರ ವಿಗ್ರಹದ ಬಾಯಿಗೆ ಸಿಗರೇಟ್​​ ಇಟ್ಟು ಯುವಕರು ವಿಡಿಯೋ ಮಾಡಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದ್ದು, ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಆಕ್ರೋಶ ಹೊರ ಹಾಕುತ್ತಿದ್ದಾರೆ.

@SumitKumar78276 ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ. ಯುವಕನ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ತನಿಖೆ ಆರಂಭಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಜಬಲ್‌ಪುರ ಆನಂದ ಕಲಾದಗಿ  ತಿಳಿಸಿದ್ದಾರೆ.

ವಿಡಿಯೋದಲ್ಲಿ ಏನಿದೆ?:  ಮಧ್ಯಪ್ರದೇಶದ ಜಬಲ್‌ಪುರದ ದೇವಸ್ಥಾನವೊಂದರಲ್ಲಿ ಯುವಕನೊಬ್ಬ ಭಗವಾನ್ ಕಾಲಭೈರವನ ಪ್ರತಿಮೆಯ ಬಾಯಿಗೆ ಸಿಗರೇಟ್ ಇಟ್ಟಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್​ ಆಗಿದೆ.

ಜಬಲ್ಪುರದ ಗ್ವಾರಿಘಾಟ್‌ನಲ್ಲಿರುವ ಶ್ರೀ ಕಾಲಭೈರವ ಮಂದಿರದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಆರೋಪಿ ಯುವಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net