ಜಮೀರ್ ಅಹ್ಮದ್ ಖಾನ್ ನಿರಾಳ : ಮತದಾರರಿಗೆ ಆಮಿಷವೊಡ್ಡಿದ ಅರ್ಜಿ ವಜಾ

highcourt
Published on

ಬೆಂಗಳೂರು :  ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್  ಖಾನ್ ವಿರುದ್ಧ ಸಲ್ಲಿಕೆಯಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪಕ್ಷ ಅಧಿಕಾರಕ್ಕೆ ಬಂದರೆ ಕೆಲ ನೀತಿ ಜಾರಿಗೊಳಿಸುವುದಾಗಿ ಭರವಸೆ ನೀಡಿರುವುದು ಪ್ರಜಾಪ್ರತಿನಿಧಿ ಕಾಯ್ದೆಯಡಿ ಮತದಾರರಿಗೆ ಆಮಿಷವೊಡ್ಡಿದಂತಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಚಾಮರಾಜಪೇಟೆಯ ಮತದಾರ ಶಶಾಂಕ್ ಜೆ. ಶ್ರೀಧರ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಪೀಠ ಈ ಆದೇಶ ನೀಡಿದೆ.

ಕಾಂಗ್ರೆಸ್ ನೀಡಿದ ಭರವಸೆಗಳು ಮತ್ತು ಉಚಿತ ಗ್ಯಾರಂಟಿಗಳಿಂದ ಸಮಾಜದ ಒಂದು ವರ್ಗವನ್ನು ಒಲೈಸಿದಂತಾಗುತ್ತದೆಯೇ? ಎಂಬ ಬಗ್ಗೆ ಚರ್ಚೆ ನಡೆಯಬೇಕಿದೆ ಮತ್ತು ಅಂತಹ ಭರವಸೆಗಳು ಈಡೇರುವ ಸಾಧ್ಯತೆಗಳ ಬಗ್ಗೆ ಮಾತದಾರರೇ ಜಾಗೃತರಾಗಬೇಕು. ನಿರ್ದಿಷ್ಟ ಪಕ್ಷಕ್ಕೆ ಮತ ಹಾಕಬೇಕೇ, ಬೇಡವೇ? ಎಂಬ ಬಗ್ಗೆ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123ರ ಅನ್ವಯ ಮತದಾರರನ್ನು ಭ್ರಷ್ಟರನ್ನಾಗಿ ಮಾಡಿದಂತಾಗುವುದಿಲ್ಲ ಎಂದು ಪೀಠ ಹೇಳಿದೆ.

ನ್ಯಾಯಾಲಯ 2013ರಲ್ಲಿ ಸುಪ್ರೀಂಕೋರ್ಟ್ ಎಸ್. ಸುಬ್ರಮಣ್ಯಂ ಬಾಲಾಜಿ ವಸರ್ಸ್ ಗೌರ್ವನ್‌ಮೆಂಟ್ ಆ್ ತಮಿಳುನಾಡು ಪ್ರಕರಣದ ತೀರ್ಪು ಉಲ್ಲೇಖಿಸಿ ಕಾಂಗ್ರೆಸ್‌ನ ಐದು ಗ್ಯಾರಂಟಿಗಳು ಸಾಮಾಜಿಕ ಕಲ್ಯಾಣ ನೀತಿಯಾಗಿದೆ. ಅವು ಆರ್ಥಿಕವಾಗಿ ಕಾರ್ಯಸಾಧ್ಯವೇ, ಇಲ್ಲವೇ ಎನ್ನುವುದು ಬೇರೆ ವಿಚಾರ. ಆ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಸರರ್ಕಾರದ ಖಜಾನೆ ಖಾಲಿಯಾಗುತ್ತದೆ ಎಂಬುದನ್ನು ಪ್ರತಿಪಕ್ಷಗಳು ಸಾಬೀತುಪಡಿಸಬೇಕು. ಆ ಬಳಿಕ ಯೋಜನೆಗಳನ್ನು ತಪ್ಪು ಎಂದು ವ್ಯಾಖ್ಯಾನಿಸಬಹುದು.

ಆದರೆ, ಅವುಗಳು ಭ್ರಷ್ಟಾಚಾರಕ್ಕೆ ಕಾರಣವಾಗುತ್ತವೆ ಎಂದು ಹೇಳಲಾಗದು ಎಂದು ವ್ಯಾಖ್ಯಾನಿಸಿತು.

ವೈಯಕ್ತಿಕವಾಗಿ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂಬುದಕ್ಕೆ ಸಾಕ್ಷಾೃಧಾರಗಳಿಲ್ಲ. ಪ್ರಣಾಳಿಕೆಯ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಅದನ್ನು ಪರಿಗಣಿಸಿ ಪ್ರತಿವಾದಿ ಆಯ್ಕೆ ಅನೂರ್ಜಿತಗೊಳಿಸಲಾಗದು ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣವೇನು?:

ಪಂಚ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಜಮೀರ್ ಆಹಮದ್ ಖಾನ್ ಮತದಾರರನ್ನು ಓಲೈಸಿ ಮತ ಕೋರಿದ್ದಾರೆ. ಆ ಮೂಲಕ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಹೀಗಾಗಿ ಅದು ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಮತದಾರರನ್ನು ಭ್ರಷ್ಟರನ್ನಾಗಿ ಮಾಡಿದಂತಾಗಿದೆ. ಆದ್ದರಿಂದ ಜಮೀರ್ ಅಹ್ಮದ್  ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net