ಕನ್ನಡ ಬಾರದಿರುವುದಕ್ಕೆ ಸ್ಪೀಕರ್ ಕಚೇರಿಯಲ್ಲಿ ಶಾಸಕನಾಗಿ ಜಮೀರ್ ಪ್ರಮಾಣವಚನ ಸ್ವೀಕಾರ!

ZameerAhmedKhan
Published on

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಸ್ಪೀಕರ್ ಕಚೇರಿಯಲ್ಲಿ ಚಾಮರಾಜಪೇಟೆ ಶಾಸಕನಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಮೇ20 ರಂದು ಜಮೀರ್ ಅಹ್ಮದ್ ಖಾನ್​​ ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಬಗ್ಗೆ ಸಾಕಷ್ಟು ವಿರೋಧ, ಟೀಕೆಗಳು ವ್ಯಕ್ತವಾಗಿತ್ತು.

ಇದೀಗ ಮತ್ತೆ ಇದೇ ವಿಚಾರವಾಗಿ ವಿವಾದ ವಾಗಬಾರದು ಎಂದು ಜಮೀರ್ ಅವರು ಸ್ಪೀಕರ್ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಬೆಳಗ್ಗೆ ವಿಧಾನಸಭೆಯಲ್ಲಿ ಇದೆ ಕಾರಣಕ್ಕೆ ಗೈರಾಗಿದ್ದರು ಎನ್ನುವ ಮಾತು ಕೇಳಿ ಬಂದಿದೆ.

ಕಳೆದ 2 ದಿನಗಳ ಹಿಂದೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಅಂತಿಮವಾಗಿ ಪ್ರಮಾಣ ವಚನ ಸ್ವೀಕರಿಸಿದ ಜಮೀರ್ ಅಹ್ಮದ್ ಖಾನ್, ಅಲ್ಲಾಹ್ ಮತ್ತು ತಮ್ಮ ತಾಯಿಯ ಹೆಸರಿನಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಸಚಿವ ಜಮೀರ್ ನಡೆಗೆ ಸಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net