ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆ ತೆರಳಲು ಪರದಾಡುತ್ತಿದ್ದ ವಿದ್ಯಾರ್ಥಿಗೆ ನೆರವಾದ ಸಚಿವ ಜಮೀರ್

zameer ahmed
Published on

ಬೆಂಗಳೂರು: ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುವ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಗೆ ಆಯ್ಕೆ ಯಾಗಿದ್ದರೂ ಅಲ್ಲಿಗೆ ತೆರಳಲು ಆರ್ಥಿಕ ಸಮಸ್ಯೆ ಎದುರಿಸಿದ್ದ ಸ್ಪರ್ಧಾಳುಗಳಿಗೆ ವಸತಿ ವಸತಿ ಸಚಿವ ಜಮೀರ್ ಅಹ್ಮದ್ ನೆರವಾಗಿದ್ದಾರೆ.

ತಿಂಗಳಲ್ಲಿ ಒಂದು ದಿನ ಸಚಿವರು ಪಕ್ಷದ ಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮದಡಿ ಅವರು ಬುಧವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಅಹವಾಲು ಸ್ವೀಕರಿದರು. ಈ ವೇಳೆ ಅಲ್ಲಿಗೆ ಆಗಮಿಸಿದ್ದ ಹೆಬ್ಬಾಳದ ಕ್ರೆಸೆಂಟ್ ಇಂಗ್ಲಿಷ್ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ತಾಹೀರ್ ಆಮೀರ್ ತಮ್ಮ ಸಮಸ್ಯೆ ಹೇಳಿಕೊಂಡರು.

ಸೆ.19ರಿಂದ 24ವರೆಗೆ ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುವ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಗೆ ಆಯ್ಕೆ ಯಾಗಿದ್ದು ಆರ್ಥಿಕ ಸಂಕಷ್ಟ ದಿಂದ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.

ಸಚಿವರು ತಕ್ಷಣ ತಮ್ಮ ವೈಯಕ್ತಿಕ ವೆಚ್ಚದಲ್ಲಿ ಸ್ಪರ್ಧೆಗೆ ಹೋಗಿ ಬರುವ ವಿಮಾನ ವೆಚ್ಚ 65 ಸಾವಿರ ರೂ. ಟಿಕೆಟ್ ಮಾಡಿಸಿ, ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಆರೋಗ್ಯ, ಶಿಕ್ಷಣ ನೆರವು ಕೋರಿ ಬಂದವರಿಗೆ ವೈಯಕ್ತಿಕ ವೆಚ್ಚದಲ್ಲಿ ಆರ್ಥಿಕ ನೆರವು ನೀಡಿದರು. ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಇಲಾಖೆ ಗಳಿಗೆ ಸಂಬಂಧಿಸಿದ ಅರ್ಜಿ ಸ್ವೀಕಾರ ಮಾಡಿ ಸಂಬಂಧಪಟ್ಟ ಇಲಾಖೆ ಗಳಿಗೆ ಕಳುಹಿಸಿ ಸೂಕ್ತ ದಾಖಲೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು.

ರಾಜ್ಯದ ವಿವಿಧ ಜಿಲ್ಲೆ ಹಾಗೂ ಬೆಂಗಳೂರು ನಗರದ ನೂರಾರು ಸಾರ್ವಜನಿಕರು, ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಅಹವಾಲು ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net