Russia and Ukraine war: 'ಪ್ರಧಾನಿ ಮೋದಿ ಮಾತ್ರ ಯುದ್ಧ ನಿಲ್ಲಿಸಬಹುದು': ಝೆಲೆನ್ಸ್ಕಿ

zelenskyy
Published on

ಕೀವ್ : ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ. ಮೋದಿಯವರ ಪ್ರಯತ್ನಗಳು ಮಾತ್ರ ರಷ್ಯಾ-ಉಕ್ರೇನ್​ ಯುದ್ಧ(Russia and Ukraine war)ವನ್ನು ನಿಲ್ಲಿಸಬಹುದು ಎಂದು ಅವರು ಹೇಳಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗಿ ಎರಡೂವರೆ ವರ್ಷಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಈ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಯುದ್ಧ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಅದೇ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಎರಡೂ ದೇಶಗಳಿಂದ ಶಾಂತಿಗಾಗಿ ನಿರಂತರವಾಗಿ ಮನವಿ ಮಾಡುತ್ತಿದ್ದಾರೆ. ಈ ನಡುವೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಯುದ್ಧವನ್ನು ಕೊನೆಗೊಳಿಸುವಲ್ಲಿ ಪ್ರಧಾನಿ ಮೋದಿ ದೊಡ್ಡ ಪಾತ್ರವನ್ನು ವಹಿಸಬಹುದು. ಅವರು ಯುದ್ಧವನ್ನು ನಿಲ್ಲಿಸಬಲ್ಲರು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಈ ಯುದ್ಧವನ್ನು ಕೊನೆಗೊಳಿಸುವ ಪ್ರಯತ್ನದಲ್ಲಿ ಪ್ರಧಾನಿ ಮೋದಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಯುದ್ಧದ ನಡುವೆ ರಷ್ಯಾ ಮತ್ತು ಉಕ್ರೇನ್‌ಗೆ ಭೇಟಿ ನೀಡಿದ ವಿಶ್ವದ ಏಕೈಕ ರಾಜಕಾರಣಿ ಮೋದಿ ಎಂದು ನಾವು ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಉಕ್ರೇನ್ ಮತ್ತು ರಷ್ಯಾದಲ್ಲಿ ತೀವ್ರ ಚಳಿಯಾಗಲಿದೆ. ಚಳಿಗಾಲದಲ್ಲಿ ಯುದ್ಧ ಮಾಡುವುದೇ ಎರಡೂ ದೇಶಗಳ ಸೈನಿಕರಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಅಧ್ಯಕ್ಷ ಝೆಲೆನ್ಸ್ಕಿ ಕೂಡ ಈ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಉಕ್ರೇನ್ ಜನರಿಗೆ ಇದು ಮೂರನೇ ಕಠಿಣ ಚಳಿಗಾಲವಾಗಿದೆ. ನಾವು ನಮ್ಮ ಶಕ್ತಿ ವ್ಯವಸ್ಥೆಗಳನ್ನು ಹಂತ ಹಂತವಾಗಿ ಬಲಪಡಿಸುತ್ತಿದ್ದೇವೆ. ನಾವು ರಷ್ಯಾದ ಸೈನ್ಯಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net