ಝಿಕಾ ಬಗ್ಗೆ ಆತಂಕ ಬೇಡ

Zika
Published on

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಝಿಕಾ ವೈರಾಣು ದೃಢಪಟ್ಟಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಹಾಗೂ ರೋಗ ಲಕ್ಷಣ ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ ಸಂಪರ್ಕಿಸುವಂತೆ ಸೂಚಿಸಿ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ.

ರೋಗ ಕುರಿತು ಭಯಪಡುವ ಅಗತ್ಯವಿಲ್ಲ. ಜ್ವರ ಪೀಡಿತರಿಗೆ ಕಣ್ಣು ಕೆಂಪಾಗುವಿಕೆ, ಕೀಲುಗಳಲ್ಲಿ ನೋವು, ತಲೆನೋವು, ದದ್ದುಗಳು, ಸ್ನಾಯುಗಳಲ್ಲಿ ನೋವು ಕಂಡುಬಂದಲ್ಲಿ ವೈದ್ಯರನ್ನು ಸಂಪರ್ಕಿಸಬೇಕು. ಈ ಜ್ವರ 2 ದಿನಗಳಿಂದ 7 ದಿನಗಳವರೆಗೆ ಇರುತ್ತದೆ. ರೋಗಲಕ್ಷಣ ಅನುಸಾರ ಚಿಕಿತ್ಸೆ ನೀಡಲಾಗುತ್ತದೆ. ಗರ್ಭಿಣಿ, ಬಾಣಂತಿಯರು ಈ ವೈರಾಣುವಿನ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net