

ಕಡೂರು: ಶರಣರ ಚಿಂತನೆಗಳಲ್ಲಿ ಸಮ ಸಮಾಜದ ಪರಿಕಲ್ಪನೆ ಕಾಣಬಹುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.
ಕುರುಬರಹಳ್ಳಿ ಗ್ರಾಮದಲ್ಲಿ ಕಸಾಪ ತಾಲೂಕು ಘಟಕ ಆಯೋಜಿಸಿದ್ದ ಮನೆಯಂಗಳದಲ್ಲಿ ಶ್ರಾವಣ ಸಂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನುಡಿದಂತೆ ನಡೆಯುವುದು ಶರಣರ ತತ್ವವಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ನಡೆಯೇ ಬೇರೆ, ನುಡಿಯೇ ಬೇರೆಯಾಗಿರುವುದನ್ನು ಕಾಣಬಹುದಾಗಿದೆ ಎಂದರು.
ಕುರುಬರಹಳ್ಳಿ ಆಧ್ಯಾತ್ಮಿಕ ಕೇಂದ್ರದ ರಾಮು ಗುರೂಜಿ ಮಾತನಾಡಿ, ಶರಣರ ಆಚಾರ-ವಿಚಾರಗಳನ್ನು ಮೈಗೂಡಿಸಿಕೊಂಡು ಸಂಸ್ಕೃತಿ ಬೆಳೆಸಬೇಕು. ಅಧ್ಯಾತ್ಮ ನಮ್ಮನ್ನು ಪರಿಶುದ್ಧರನ್ನಾಗಿ ಮಾಡುತ್ತದೆ ಎಂದರು.
ಕೆ.ಆರ್.ರಮೇಶ್, ಕಡೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಬಿ.ಪ್ರಕಾಶ್, ಪಿಡಿಒ ಎಚ್.ಎಂ.ಲಿಂಗರಾಜು, ರಘು, ಕೆ.ಎಂ.ಮಂಜುನಾಥ್, ಹೋಬಳಿ ಕಸಾಪ ಅಧ್ಯಕ್ಷ ಬಸವರಾಜಪ್ಪ, ಕಾರ್ಯದರ್ಶಿ ಅನಿಲ್ಕುಮಾರ್, ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಮಲ್ಲೇಶಪ್ಪ, ಗ್ರಾಪಂ ಸದಸ್ಯರಾದ ಶಿವಶಂಕರ್, ಮಲ್ಲಿಕಾರ್ಜುನ ಮತ್ತಿತರರಿದ್ದರು.