ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಜೂ ಕ್ಲಬ್ ಆಯೋಜನೆ

Vijayavani-Featured-Image
Published on

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಪ್ರಕೃತಿ, ವನ್ಯಜೀವಿಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತು ವನ್ಯಜೀವಿ ಹಾಗೂ ಪ್ರಕೃತಿಯ ಸಂರಕ್ಷಣೆಗಾಗಿ ಕೆಲಸ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸಲು ಜೂ ಕ್ಲಬ್ ಆಯೋಜಿಸಲಾಗಿದೆ.

ವನಸಿರಿ ಮತ್ತು ವನ್ಯಜೀವಿ ಸಂಕುಲಗಳನ್ನು ಸಂರಕ್ಷಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು 15 ವಾರಗಳ ಕಾರ್ಯಕ್ರಮವಾಗಿದ್ದು, 10ರಿಂದ 18 ವರ್ಷದೊಳಗಿನ ಮಕ್ಕಳು ಪಾಲ್ಗೊಳ್ಳಬಹುದಾಗಿದೆ. ಅ.13ರಿಂದ ಚಾಲನೆ ಸಿಗಲಿದ್ದು, ಪ್ರತಿ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕ್ಲಬ್ ಚಟುವಟಿಕೆಗಳು ಇರಲಿವೆ.

ಆಸಕ್ತರು ಅ.6ರೊಳಗೆ ಅರ್ಜಿಯ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು. (ಮೊ: 9035092797) ನೋಂದಣಿಯನ್ನು ಪೂರ್ಣಗೊಳಿಸಲು ಅಗತ್ಯವಿರುವ ದಾಖಲೆಗಳು, ಜೂ ಕ್ಲಬ್ ಶುಲ್ಕ ಹಾಗೂ ಅವಶ್ಯ ಹೆಚ್ಚಿನ ವಿವರಗಳೊಂದಿಗೆ ದೃಢೀಕರಣ ಇ-ಮೇಲ್ ಕಳುಹಿಸಲಾಗುವುದು. ಕಾರ್ಯಕ್ರಮದಲ್ಲಿ ಗರಿಷ್ಠ 60 ವಿದ್ಯಾರ್ಥಿಗಳನ್ನು ಪರಿಗಣಿಸಲಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ನೋಂದಣಿ ಶುಲ್ಕ 1,000 ರೂ. ಆಗಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಯಾವುದೇ ನೊಂದಣಿ ಶುಲ್ಕ ಇರುವುದಿಲ್ಲ ಎಂದು ಬನ್ನೇರುಘಟ್ಟ ಉದ್ಯಾನದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net