Zubeen Garg | ಗಾಯಕ ಜುಬೀನ್ ಗರ್ಗ್ ಸಾವಿನ ಕುರಿತು ತನಿಖೆ; ಸಿಬಿಐಗೆ ಶಿಫಾರಸು ಮಾಡಲು ಹಿಂದೇಟು ಹಾಕುವುದಿಲ್ಲ ಎಂದ ಸಿಎಂ ಹಿಮಂತ ಬಿಸ್ವಾ ಶರ್ಮಾ!

Zubeen Garg Himanta Biswa Sarma
Published on

Zubeen Garg: ಅಸ್ಸಾಮಿ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಕುರಿತು ಅನೇಕ ರೀತಿಯ ಅನುಮಾನಗಳು ವ್ಯಕ್ತವಾದ ಹಿನ್ನಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಅಗತ್ಯವಿದ್ದರೆ ಸರ್ಕಾರ ಸಿಬಿಐ ತನಿಖೆಗೆ ಕೋರಲು ಕೂಡ ಹಿಂದೇಟು ಹಾಕುವುದಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಜನರನ್ನು ಶಾಂತವಾಗಿರವಂತೆ ಒತ್ತಾಯಿಸಿದ, ಸಿಎಂ ಶರ್ಮಾ, ಈಗಾಗಲೇ ಕೈಗೆತ್ತಿಕೊಂಡಿರುವ ತನಿಖೆ 15 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, ಎಸ್‌ಐಟಿ ಮೇಲೆ ಜನರು ನಂಬಿಕೆ ಇಡಬೇಕು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹರಡಬಾರದು, ಇದು ತನಿಖೆಗೆ ಅಡ್ಡಿಯಾಗಬಹುದು ಎಂದಿದ್ದಾರೆ.

ಜುಬೀನ್ ಸಾವಿನ ತನಿಖೆ ನಡೆಸುತ್ತಿರುವ ಎಸ್‌ಐಟಿ ಗುರುವಾರ(ಸೆ 25) ಗುವಾಹಟಿಯಲ್ಲಿರುವ ಮ್ಯಾನೇಜರ್ ಸಿದ್ಧಾರ್ಥ ಶರ್ಮಾ ಅವರ ಮನೆ ಮೇಲೆ ದಾಳಿ ನಡೆಸಿದ್ದು. ಎಎನ್‌ಐ ವರದಿಯ ಪ್ರಕಾರ, ಜುಬೀನ್ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದ ಕಾರ್ಯಕ್ರಮದ ಮುಖ್ಯ ಸಂಘಟಕ ಶ್ಯಾಮಕಾನು ಮಹಾಂತ ಅವರ ಗುವಾಹಟಿ ನಿವಾಸದ ಮೇಲೂ ಎಸ್‌ಐಟಿ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಂಗಾಪುರದಲ್ಲಿ ನಡೆಸಿದ ಶವಪರೀಕ್ಷೆಯ ವರದಿಯಲ್ಲಿ, ಜುಬೀನ್ ಸಾವಿಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದೇ ಕಾರಣವೆಂದು ಎಂದು ತಿಳಿದುಬಂದಿದೆ. ಈ ವಿಷಯವಾಗಿ ಪ್ರತಿಕ್ರಿಯೆ ನೀಡಿರುವ ಅವರ ಅಭಿಮಾನಿಗಳು ಇದರಲ್ಲಿ ಷಡ್ಯಂತ್ರವಿದೆ ಎಂದು ಆರೋಪಿಸಿದ್ದು, ಜುಬೀನ್​​​ ವ್ಯವಸ್ಥಾಪಕ ಸಿದ್ಧಾರ್ಥ ಶರ್ಮಾ ಮತ್ತು NEIF ಮುಖ್ಯ ಸಂಘಟಕ ಶ್ಯಾಮಕಾನು ಮಹಾಂತ ವಿರುದ್ಧ ರಾಜ್ಯಾದ್ಯಂತ ಹಲವಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜುಬೀನ್ ಗರ್ಗ್ ಸಾವಿಗೆ ಕಾರಣ ಮತ್ತು ಆ ಸಂದರ್ಭಗಳ ತನಿಖೆಗಾಗಿ ಸಿಐಡಿ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ನೇತೃತ್ವದಲ್ಲಿ 10 ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಜುಬೀನ್ ಗರ್ಗ್ ಸಾವಿನ ಪ್ರಕರಣದ ಎಸ್‌ಐಟಿ ತನಿಖೆಯಲ್ಲಿ ಸತ್ಯ ಹೊರಬರದಿದ್ದರೆ, ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಶಿಫಾರಸು ಮಾಡುತ್ತದೆ ಎಂದು ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net