ಅ.31ಕ್ಕೆ ಎ.ಎಂ.ಪ್ರಸಾದ್, ಸುನೀಲ್‌ಕುಮಾರ್ ನಿವೃತ್ತಿ

IPS
Published on

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಹಾಗೂ ಟಿ. ಸುನೀಲ್‌ಕುಮಾರ್ ಅವರು ಅ.31ಕ್ಕೆ ನಿವೃತ್ತಿ ಹೊಂದಲಿದ್ದಾರೆ.

ಅ.29ರ ಬೆಳಗ್ಗೆ 8 ಗಂಟೆಗೆ ಕೋರಮಂಗಲ 3ನೇ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ಎ.ಎಂ. ಪ್ರಸಾದ್ ಮತ್ತು ಸುನೀಲ್ ಕುಮಾರ್ ಅವರಿಗೆ ಪೊಲೀಸ್ ಇಲಾಖೆಯಿಂದ ಬಿಳ್ಕೋಡುಗೆ ಸಮಾರಂಭ ಏರ್ಪಡಿಸಲಾಗಿದೆ.

ಬಿಹಾರ ಮೂಲದ ಎ.ಎಂ. ಪ್ರಸಾದ್ ಸದ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ರಾಜ್ಯ ಗುಪ್ತದಳ ಸೇರಿದಂತೆ ಉನ್ನತ್ತ ಹುದ್ದೆಗಳಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳ(ಎಸಿಪಿ) ಎಡಿಜಿಪಿ ಟಿ. ಸುನೀಲ್‌ಕುಮಾರ್ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಈ ಮೊದಲು ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ, ಕಮಿಷನರ್ ಆಗಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ 31 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಡಿಜಿಪಿ ಎ.ಎಂ. ಪ್ರಸಾದ್ ನಿವೃತ್ತಿಯಿಂದ ತೆರವಾಗುವ ಸ್ಥಾನಕ್ಕೆ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಅವರನ್ನು ಡಿಜಿಪಿಯಾಗಿ ಬಡ್ತಿ ನೀಡಲಾಗುತ್ತದೆ. ಡಿಸೆಂಬರ್ 31ಕ್ಕೆ ಡಿಜಿಪಿ ಡಾ.ಆರ್.ಪಿ. ಶರ್ಮಾ ನಿವೃತ್ತಿಯಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net