ಅಂಕೋಲಾದಲ್ಲಿ ಭೀಕರ ಅಪಘಾತ

ANKOLA ACCIDENT
Published on

ಅಂಕೋಲಾ: ಕಾರು ಹಾಗೂ ಕೆಎಸ್​ಆರ್​ಟಿಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರ್​ನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಬಾಳೆಗುಳಿ ಬಳಿ ಭಾನುವಾರ ಸಂಜೆ ಸಂಭವಿಸಿದೆ.

ಕಾರಿನಲ್ಲಿದ್ದ ಮೃತಪಟ್ಟ ನಾಲ್ವರು ತಮಿಳುನಾಡು ಮೂಲದವರು. ಕಾರ್​ನಲ್ಲಿದ್ದ ಇನ್ನೊಬ್ಬನ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗೋಕರ್ಣದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್ ಹಾಗೂ ಕಾರವಾರದಿಂದ ಅಂಕೋಲಾ ಕಡೆಗೆ ಹೋಗುತ್ತಿದ್ದ ಕಾರು ಬಾಳೆಗುಳಿ ಬಳಿ ಪರಸ್ಪರ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net