ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗಳ ಆಹ್ವಾನ

application
Published on

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ತಿ. ನರಸೀಪುರ ತಾಲ್ಲೂಕಿನಲ್ಲಿ 10 ಅಂಗನವಾಡಿ ಕಾರ್ಯಕರ್ತೆ ಮತ್ತು 37 ಅಂಗನವಾಡಿ ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿಯನ್ನು ಈಗಾಗಲೇ ಆಹ್ವಾನಿಸಲಾಗಿತ್ತು, ಸದರಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಅಭ್ಯರ್ಥಿಗಳ ತಾತ್ಕಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಯ್ಕೆ ಪಟ್ಟಿಯ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಖುದ್ದಾಗಿ ಅಥವಾ ಲಿಖಿತವಾಗಿ ಅಗತ್ಯ ಸಮರ್ಥನಿಯ ದಾಖಲೆಗಳೊಂದಿಗೆ ಮೈಸೂರು ಶಿಶು ಅಭಿವೃದ್ಧಿ ಯೋಜನಾ ಕಛೇರಿಯ ವೇಳೆಯಲ್ಲಿ ಏಪ್ರಿಲ್ 19 ರ ಸಂಜೆ 5.30 ರೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08227-297267, 7019403686 ನ್ನು ಸಂಪರ್ಕಿಸಬಹುದು ಎಂದು ತಿ. ನರಸೀಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net