ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಂದ ಪ್ರತಿಭಟನೆ

CTD NEWS STRIKE ANGANAVADI----
Published on

ಚಿತ್ರದುರ್ಗ: ಸೇವೆ ಕಾಯಂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜಿಪಂ ಕಚೇರಿ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಿಐಟಿಯು ನೇತೃತ್ವದಲ್ಲಿ ಪ್ರವಾಸಿ ಮಂದಿರದಿಂದ ಜಿಪಂ ಕಚೇರಿವರೆಗೆ ಮೆರವಣಿಗೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್. ಬಣಕಾರ್ ಅವರ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ರನಾವಿಸಿದರು. ಈ ವೇಳೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

ಸಿಐಟಿಯು ಸಂಚಾಲಕ ಡಿ.ಎಂ. ಮಲಿಯಪ್ಪ ಮಾತನಾಡಿ, ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೇವೆ ಕಾಯಂಗೊಳಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನವನ್ನು 26 ಸಾವಿರ ರೂ. ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯಸರ್ಕಾರ ಘೋಷಿಸಿದಂತೆ 15 ಸಾವಿರ ರೂ.ಗಳಿಗೆ ಗೌರವ ಧನ ಹೆಚ್ಚಿಸಬೇಕು ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಸಿಐಟಿಯು ಸಹ ಸಂಚಾಲಕ ಸಿ.ಕೆ. ಗೌಸ್‌ಪೀರ್ ಮಾತನಾಡಿ, ಬೇಡಿಕೆಗಳನ್ನು ಈಡೇರಿಸದ ಸರ್ಕಾರಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇಂದಿರಮ್ಮ, ಜೆ.ಎನ್. ಗಂಗಮ್ಮ, ಬಿ. ಬೋರಮ್ಮ, ನಿರ್ಮಲಾ, ಆಶಾರಾಣಿ, ಮಂಜುಳಾ, ಕಮಲಾ, ಎಸ್. ಕಲ್ಯಾಣಮ್ಮ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net