ಅಂಗನವಾಡಿ ನಿವೃತ್ತ ಶಿಕ್ಷಕಿಯರಿಗೆ ಬೀಳ್ಕೊಡುಗೆ

Anganavadi karyakrama
ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತರಾಗಿ ಹಾಗೂ ಸಹಾಯಕಿಯಾರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕಾಮಾಕ್ಷಿ, ಭಾಗ್ಯಮ್ಮ ಹಾಗೂ ಉಮಾವತಿ ಅವರನ್ನು ಸನ್ಮಾನಿಸಲಾಯಿತು. ಶನಿವಾರಸಂತೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಇದ್ದರು.
Published on

ಶನಿವಾರಸಂತೆ: ಶನಿವಾರಸಂತೆ ಅಂಗನವಾಡಿ ಕೇಂದ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಕಾಮಾಕ್ಷಿ, ಸಹಾಯಕಿ ಭಾಗ್ಯಮ್ಮ ಹಾಗೂ ಗುಂಡೂರಾವ್ ಬಡಾವಣೆಯ ಅಂಗನವಾಡಿ ಕೇಂದ್ರದ ಸಹಾಯಕಿ ಉಮಾವತಿ ಅವರನ್ನು ಶನಿವಾರಸಂತೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಶನಿವಾರ ಸನ್ಮಾನಿಸಿ ಬೀಳ್ಕೊಟ್ಟರು.

ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಮಹಾ ಮಂಡಳಿ (ಟಿಯುಸಿಸಿ) ಸಂಘಟನೆಯ ಸೋಮವಾರಪೇಟೆ ತಾಲೂಕು ಅಧ್ಯಕ್ಷೆ ಧನಲಕ್ಷ್ಮೀ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಂಗನವಾಡಿಗಳಿಗೆ ಮಕ್ಕಳು ಬರುತ್ತಿಲ್ಲ. ಪಾಲಕರು ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸಿ ಸರ್ಕಾರದ ಎಲ್ಲ ಸೌಲಭ್ಯ ಪಡೆದುಕೊಳ್ಳಬೇಕು. ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಉತ್ತಮ ವಾತಾವರಣ ಇದ್ದು, ಇದನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಗುಂಡೂರಾವ್ ಬಡಾವಣೆಯ ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ, ಧನು ಮಂಜುನಾಥ, ಮೀನಾಕ್ಷಿ, ಜೀನತ್, ಜಯಮ್ಮ, ಗಿರಿಜಾ ಸೇರಿದಂತೆ ಶನಿವಾರಸಂತೆ ಸುತ್ತಮುತ್ತಲಿನ ವ್ಯಾಪ್ತಿಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net