

ಕೋಲಾರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಮತ್ತು ಐತಿಹಾಸಿಕ ಕ್ಷೇತ್ರವಾದ ಅಂತರಗಂಗೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ದೇವಾಲಯದ ಬಳಿಗೆ ಬರಲು ಅಗತ್ಯ ರಸ್ತೆ ನಿರ್ಮಾಣ ಮಾಡಬೇಕಿದ್ದು, ಈ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ಆಹಾರ ಮತ್ತ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಭರವಸೆ ನೀಡಿದರು.
ಮಹಾಶಿವರಾತ್ರಿ ಪ್ರಯುಕ್ತ ಕುಟುಂಬ ಸದಸ್ಯರೊಂದಿಗೆ ಅಂತರಗಂಗೆಯ ಕಾಶಿವಿಶ್ವೇಶ್ವರಸ್ವಾಮಿ ದೇವಾಲಯಕ್ಕೆ ಬುಧವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು, ಲೋಕೋಪಯೋಗಿ, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ಹಿರಿಯರು, ಮಕ್ಕಳಿಗೆ ಮೆಟ್ಟಿಲು ಹತ್ತಿ ಕಾಶಿವಿಶ್ವೇಶ್ವರಸ್ವಾಮಿ ದೇವಾಲಯಕ್ಕೆ ಬರಲು ಕಷ್ಟವಾಗುತ್ತದೆ. ಹೀಗಾಗಿ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದ ಅವರು, 1957ರಲ್ಲಿ ವಿದ್ಯಾರ್ಥಿಯಾಗಿದ್ದಾಗ ಸ್ಕೌಟ್ ಟಕದಿಂದ ಮೊದಲ ಬಾರಿಗೆ ಇಲ್ಲಿಗೆ ಬಂದು ಪೂಜೆ ಮಾಡಿಸಿಕೊಂಡು ಹೋಗಿದ್ದೆ ಎಂದು ಸ್ಮರಿಸಿಕೊಂಡರು.
ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಎಸ್ಸಿ ಟಕದ ಅಧ್ಯಕ್ಷ ಕೆ.ಜಯದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಪ್ರಸಾದ್ ಬಾಬು ಇದ್ದರು.
ಸಿಎಂ ಗಮನಕ್ಕೆ ಜಿಲ್ಲೆಯ ಸ್ಥಿತಿಗತಿ
ಈ ಬಾರಿ ಬಜೆಟ್ನಲ್ಲಿ ಜಿಲ್ಲೆಗೆ ಅಗತ್ಯವಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಸಲಹೆಗಳನ್ನು ನೀಡಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಹಳ ಗುರುತರವಾದ ಕೆಲಸಗಳಾಬೇಕಿದ್ದು, ಆ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ ಎಂದು ಕೆ.ಎಚ್.ಮುನಿಯಪ್ಪ ತಿಳಿಸಿದರು. ಇಲ್ಲಿಯವರೆಗೆ ಅಕ್ಕಿಯ ಹಣ ನೀಡುತ್ತಾ ಬಂದಿದ್ದೇವೆ, ಜತೆಗೆ 2.10 ಲಕ್ಷ ಮೆಟ್ರಿಕ್ ಟನ್ ಅಕ್ಕಿಗೆ ಹಣ ನೀಡಿದ್ದು, ಅಕ್ಕಿ ನೀಡುವುದಾಗಿ ಕೇಂದ್ರ ಸರ್ಕಾರ ಒಪ್ಪಿದ್ದು, ಅಕ್ಕಿ ಸರಬರಾಜು ಆಗುತ್ತಿದೆ. ಹೀಗಾಗಿ 10 ಕೆಜಿ ಅಕ್ಕಿಯನ್ನು ಮುಂದಿನ ತಿಂಗಳಿಂದ ನೀಡಲಾಗುವುದು. ರಾಜ್ಯದ 4.5 ಕೋಟಿ ಜನರಿಗೆ ಅನುಕೂಲವಾಗಲಿದ್ದು, ನುಡಿದಂತೆ ನಡೆದಿದ್ದೇವೆ ಎಂದರು.
ಕೂತು ಬಗೆಹರಿಸಿಕೊಳ್ಳಿ
ಜಿಲ್ಲಾ ಉಸ್ತುವಾರಿ ಸಚಿವರು ದಲಿತ ಶಾಸಕರನ್ನು ಪರಿಗಣಿಸುತ್ತಿಲ್ಲವೆಂದು ಬಂಗಾರಪೇಟೆ ಶಾಸಕರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಆ ವಿಷಯಗಳ ಬಗ್ಗೆ ಮಾತನಾಡಲು ನನಗೆ ಇಷ್ಟಪಡುವುದಿಲ್ಲ. ಎಲ್ಲರೂ ಒಂದೇ ಪಕ್ಷದಲ್ಲಿದ್ದು, ಇಂತಹ ವಿಚಾರಗಳನ್ನು ಬಗೆಹರಿಸಿಕೊಳ್ಳಬೇಕು. ದೊಡ್ಡ ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲ ಸಾಮಾನ್ಯ, ಅವುಗಳನ್ನು ಬದಿಗೊತ್ತಿ ಅಭಿವೃದ್ಧಿ ಕಡೆಗೆ ಒತ್ತು ನೀಡಬೇಕೆಂದರು.
26ಕೋಲಾರ3
ಕೋಲಾರ ಅಂತಗಂಗೆ ದಣ ಕಾಶಿ ವಿಶ್ವೇಶ್ವರಯ್ಯ ದೇವಾಲಯದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ ಅವರು ಕುಟುಂಬ ಸಮೇತ ಪೂಜೆ ಸಲ್ಲಿಸಿದರು.