ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಬೇರ್ ಸಿನಿಮಾ ಆಯ್ಕೆ

Published on

ಮಡಿಕೇರಿ: ಈಗಾಗಲೇ ಬಾಂಗ್ಲಾ ದೇಶದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರ್ಲ್ಡ್ ಪ್ರೀಮಿಯರ್ ಕಂಡು ಹೆಸರು ಮಾಡಿರುವ ಕೂರ್ಗ್ ಕಾಫಿ ವುಡ್ ಮೂವಿಸ್‌ನ ಬ್ಯಾನರ್ ಅಡಿಯಲ್ಲಿ ತಯಾರಾದ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ ಬೇರ್ ಕೊಡವ ಸಿನಿಮಾ ಇದೀಗ ೧೫ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.


ಫೆ.೨೯ ರಿಂದ ಮಾ.೭ರವರೆಗೆ ಬೆಂಗಳೂರಿನ ಒರಿಯಾನ್ ಮಾಲ್‌ನಲ್ಲಿ ನಡೆಯುವ ಚಲನಚಿತ್ರೋತ್ಸವದ Unsung Incredible India ವಿಭಾಗದಲ್ಲಿ ಪ್ರದರ್ಶನಗೊಳ್ಳಲಿದೆ. ಇದು ಕೊಡವ ಸಿನಿಮಾ ರಂಗದಲ್ಲಿ ಬಹುದೊಡ್ಡ ಸಾಧನೆಯಾಗಿದೆ ಎಂದು ಚಿತ್ರತಂಡ ಹರ್ಷವ್ಯಕ್ತಪಡಿಸಿದೆ.


ಮೊದಲು ನಡೆದ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ವಿವಿಧ ವಿಭಾಗಗಳಲ್ಲಿ ಆಯ್ಕೆಗೊಂಡು ಪ್ರಶಸ್ತಿಗಳನ್ನು ಪಡೆದ ಕೊಡವ ಮತ್ತು ಕನ್ನಡ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪರವರ ನಿರ್ಮಾಣ, ನಿರ್ದೇಶನದಲ್ಲಿ ಬೇರ್ ಕೊಡವ ಸಿನಿಮಾ ಮೂಡಿ ಬಂದಿದೆ.


ಪ್ರಥಮ ಬಾರಿಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕೊಡಗಿನ ಒಂದೇ ಕುಟಂಬದ ಪತಿ ಪತ್ನಿಯರ ಕೊಡವ ಹಾಗೂ ಕನ್ನಡ ಸಿನಿಮಾ ಆಯ್ಕೆಯಾಗಿರುವುದು ಹೆಗ್ಗಳಿಗೆಯ ವಿಷಯವಾಗಿದ್ದು, ಇವರ ಸಾಧನೆಗೆ ಚಲನಚಿತ್ರದ ಅನೇಕ ನಟ ಹಾಗೂ ನಿರ್ದೇಶಕ ಪ್ರಕಾಶ್ ಕಾರ್ಯಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net