ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ

hnp protest
ಹೊಳೆನರಸೀಪುರದಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು. ಶ್ರೀನಿವಾಸ್,ಪುಟ್ಟರಾಜು ಮಂಜುನಾಥ , ನಟರಾಜ್ ಇದ್ದರು.
Published on

ಹೊಳೆನರಸೀಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ತಾಲೂಕು ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು.

ತಾಲೂಕು ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಡಿಕೇರಿಯಲ್ಲಿ ಮಾ.12ರಂದು ಬಿಜೆಪಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲಿನ ಕೆಳಗೆ ಹಾಕಲಾಗಿತ್ತು. ಇದು ಸಂವಿಧಾನ ಶಿಲ್ಪಿಗೆ ಮಾಡಿದ ಅವಮಾನ. ಆದ್ದರಿಂದ ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕಾರ್ಯಕ್ರಮದ ಆಯೋಜಕರು, ಫ್ಲೆಕ್ಸ್ ಮಾಡಿಸಿದವರು ಹಾಗೂ ಹಾಕಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.

ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್, ವಕೀಲರಾದ ಪುಟ್ಟರಾಜು ಮಂಜುನಾಥ , ನಟರಾಜ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net