ಅಂಬೇಡ್ಕರ್ ಭಾವಚಿತ್ರವುಳ್ಳ ನಾಮಲಕವನ್ನು ಹರಿದು ಹಾಕಿದ್ದ ಪ್ರಕರಣ ಸಂಬಂಧ ತನಿಖೆ ತೀವ್ರಗೊಳಿಸಿದ ಪೊಲೀಸ್

29
Published on

ತಾಲೂಕಿನ ವಾಜಮಂಗಲದಲ್ಲಿ ಅಂಬೇಡ್ಕರ್ ಭಾವಚಿತ್ರವುಳ್ಳ ನಾಮಲಕವನ್ನು ಹರಿದು ಹಾಕಿದ್ದ ಪ್ರಕರಣ ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಪ್ರಕರಣದ ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಡಿವೈಎಸ್ಪಿ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಜತೆಗೆ ಘಟನಾ ಸ್ಥಳದಲ್ಲಿನ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿರುವ ಪೊಲೀಸರು ಅನುಮಾನಸ್ಪದವಾಗಿ ಸಂಚರಿಸಿದ ವಾಹನಗಳ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.

ಘಟನೆ ಸ್ಥಳದಲ್ಲಿ ಸಕ್ರಿಯವಾಗಿದ್ದ ಮೊಬೈಲ್ ನಂಬರ್‌ಗಳನ್ನು ಪತ್ತೆ ಹಚ್ಚಿರುವ ಪೊಲೀಸರು, ಅನುಮಾನಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಿದ್ದಾರೆ. ಗ್ರಾಮದಲ್ಲಿ ಏ.14ರಂದು ಅದ್ಧೂರಿಯಾಗಿ ಅಂಬೇಡ್ಕರ್ ಜಯಂತಿಗೆ ಅಳವಡಿಎ ಮಾಡಲಾಗಿದ್ದ ಅಂಬೇಡ್ಕರ್ ಭಾವಚಿತ್ರವಳ್ಳ ನಾಮಲಕಕ್ಕೆ ಕೆಸರು ಎರಚುವುದರೊಂದಿಗೆ ಕ್ಕ್ಸ್ ಹರಿದು ಹಾಕಲಾಗಿತ್ತು.ಈ ಸಂಬಂಧ ಗ್ರಾಮದ ಯುವಕ ಶಿವು ನೀಡಿದ್ದ ದೂರಿನ ಮೇರೆಗೆ ವರುಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net