

ಕೊಳ್ಳೇಗಾಲ: ತಾಲೂಕಿನ ಸರಗೂರು ಗ್ರಾಮದಿಂದ ಕಾವೇರಿ ನದಿಗೆ ತೆರಳುವ ರಸ್ತೆಯಲ್ಲಿ ಅಕ್ರಮವಾಗಿ 6 ಜೀವಂತ ಗೌಜಲ ಹಕ್ಕಿಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ತಿ.ನರಸೀಪುರ ತಾಲೂಕಿನ ತಲಕಾಡು ಹೋಬಳಿಯ ಮೇದನಿ ಗ್ರಾಮದ ಶಿವಣ್ಣ (41) ಬಂಧಿತ ಆರೋಪಿ. ಈತ ಜೀವಂತ 6 ಗೌಜಲ ಹಕ್ಕಿಗಳನ್ನು ಹಿಡಿದು, ಅವುಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದ ವೇಳೆ ಅರಣ್ಯ ಸಂಚಾರಿ ದಳ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ವನ್ಯಜೀವಿ ಸಂರಕ್ಷಣಾ ತಿದ್ದುಪಡಿ ಕಾಯ್ದೆಯಡಿ ಪಟ್ಟಣದ ಅರಣ್ಯ ಸಂಚಾರಿ ದಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.