ಅಕಾಲಿಕ ಮಳೆ ತಂದ ಸಂಕಷ್ಟ; ೧೦೦೦ ಕೋಟಿ ರೂ. ವಿಶೇಷ ಪರಿಹಾರ ಪ್ಯಾಕೇಜ್‌ಗೆ ಕಾಂಗ್ರೆಸ್ ಒತ್ತಾಯ

11adarshkdga1
Published on

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್, ಸಂಯೋಜಕ ಎಚ್.ಎಂ.ನಂದಕುಮಾರ್, ಜಿಲ್ಲಾ ವಕ್ತಾರ ಟಿ.ಈ.ಸುರೇಶ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ, ಪರಿಶಿಷ್ಟ ಜಾತಿ ಘಟಕದ ನಗರಾಧ್ಯಕ್ಷ ಮುದ್ದುರಾಜ್ ಮತ್ತಿತರರು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.

ಕೊಡಗಿನ ರೈತರು, ಬೆಳೆಗಾರರು ಹಾಗೂ ಕಾರ್ಮಿಕ ವರ್ಗದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕೊಡಗು ಜಿಲ್ಲೆಯಲ್ಲೇ ಅರಣ್ಯ ಸಚಿವರು, ಕಂದಾಯ ಸಚಿವರು, ಕಾರ್ಮಿಕ ಸಚಿವರು, ಕೃಷಿ ಸಚಿವರು ಹಾಗೂ ಈ ಇಲಾಖೆಗೆ ಸಂಬಂಧಿಸಿದ ರಾಜ್ಯದ ಹಿರಿಯ ಅಧಿಕಾರಿಗಳ ವಿಶೇಷ ಸಭೆಯನ್ನು ನಡೆಸಬೇಕು ಎಂದು ಕಾಂಗ್ರೆಸ್ ಪ್ರಮುಖರು ಮನವಿಯಲ್ಲಿ ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಕೊಡಗಿನ ರೈತರು ಹಾಗೂ ಬೆಳೆಗಾರರಿಗೆ ಆರ್ಥಿಕವಾಗಿ ಚೇತರಿಸಿಕೊಳ್ಳಲು ಸಾಧ್ಯವೇ ಆಗಿಲ್ಲ. ಈ ಕಾರಣದಿಂದ ಕಾರ್ಮಿಕ ವರ್ಗ ಕೂಡ ಕಷ್ಟ ಅನುಭವಿಸುತ್ತಿದೆ. ವ್ಯವಹಾರಿಕವಾಗಿ ಕೊಡಗು ಹಿನ್ನಡೆಯನ್ನು ಅನುಭವಿಸುತ್ತಿದೆ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಕೊಡಗಿನ ನೆರವಿಗೆ ಧಾವಿಸಿ ಮೊದಲ ಹಂತದಲ್ಲಿ ಒಂದು ಸಾವಿರ ಕೋಟಿ ರೂ. ಬೆಳೆ ಪರಿಹಾರ ಘೋಷಿಸಬೇಕೆಂದು ಮಂಜುನಾಥ್ ಕುಮಾರ್ ಒತ್ತಾಯಿಸಿದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಪ್ರಾಕೃತಿಕ ವಿಕೋಪಗಳಿಂದ ಕೊಡಗಿನ ರೈತಾಪಿ ವರ್ಗ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ವರ್ಷ ಕೋವಿಡ್ ಪರಿಸ್ಥಿತಿಯಿಂದ ನಷ್ಟ ಎದುರಾಗಿದೆ. ೨೦೨೧ರಲ್ಲಿ ಆಶಾದಾಯಕ ಬೆಳವಣಿಗೆಗಳು ಇರಬಹುದೆಂದು ಭಾವಿಸಲಾಗಿತ್ತು. ಆದರೆ, ಆರಂಭದಲ್ಲೆ ಅಕಾಲಿಕ ಮಳೆ ಸುರಿದು ಕಾಫಿ, ಭತ್ತ, ಏಲಕ್ಕಿ, ಅಡಿಕೆ ಸಂಪೂರ್ಣ ನಾಶವಾಗಿದೆ. ಗಿಡದಲ್ಲಿರುವ ಕಾಫಿ ಕೊಳೆಯುತ್ತಿದ್ದರೆ, ಒಣಗಲು ಹಾಕಿದ ಫಸಲು ಅತಿಯಾದ ಮಳೆಗೆ ಕೊಚ್ಚಿಹೋಗಿದೆ. ಕೊಯ್ಲಿಗೆ ಬಂದಿದ್ದ ಭತ್ತ ನೀರು ಪಾಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ ಪಕ್ಷದ ಪ್ರಮುಖರು ಪ್ರಾಕೃತಿಕ ವಿಕೋಪದಿಂದ ಕೊಡಗಿನಲ್ಲಿ ಆಗಿರುವ ಬೆಳೆ ನಷ್ಟದ ಬಗ್ಗೆ ಸಮೀಕ್ಷೆ ನಡೆಸಲು ವಿಶೇಷ ಅಧಿಕಾರಿಗಳ ಹಾಗೂ ತಜ್ಞರ ಸಮಿತಿಯನ್ನು ಜಿಲ್ಲೆಗೆ ಕಳುಹಿಸಿಕೊಡಬೇಕೆಂದು ಒತ್ತಾಯಿಸಿದರು.

ಮಡಿಕೇರಿ: ಅಕಾಲಿಕ ಮಳೆಯಿಂದ ಕೊಡಗಿನ ರೈತರು ಹಾಗೂ ಬೆಳೆಗಾರರು ಸಾಕಷ್ಟು ಕಷ್ಟ, ನಷ್ಟಗಳನ್ನು ಅನುಭವಿಸುತ್ತಿರುವುದರಿಂದ ಸರ್ಕಾರ ತುರ್ತಾಗಿ ಒಂದು ಸಾವಿರ ಕೋಟಿ ರೂ. ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net