

ಜಿಲ್ಲಾಡಳಿತ, ಮೈಸೂರು ಮತ್ತು ಕೊಡಗು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಮೈಸೂರು ಮತ್ತು ಕೊಡಗು ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥಾಪನೆಗೊoಡು 50 ವರ್ಷಗಳಾದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವವನ್ನು ಅಕ್ಟೋಬರ್ 27 ರಂದು ಬೆಳಗ್ಗೆ 10 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ, ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ, ಉಪ ಮುಖ್ಯ ಮಂತ್ರಿಗಳಾದ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ, ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್, ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು ಅವರ ಘನ ಉಪಸ್ಥಿತಿಯಲ್ಲಿ, ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರ ಸ್ವಾಮಿ, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ., ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ.