ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಯುವಕನ ಬಂಧನ

Crime Logo
Published on

ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಯುವಕನ್ನು ಕೆ.ಆರ್. ಠಾಣೆ ಪೊಲೀಸರು ಬಂಧಿಸಿದ್ದು, ರಾಸುಗಳನ್ನು ರಕ್ಷಿಸಿದ್ದಾರೆ.

ಮಂಡ್ಯ ಜಿಲ್ಲೆ ಕಿಕ್ಕೇರಿರಿಯ ಚಂದನ್ ಬಂಧಿತ. ವಾಹನದಲ್ಲಿ ರಾಸುಗಳನ್ನು ತುಂಬಿಕೊಂಡು ಬರುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ರಾಷ್ಟ್ರ ರಕ್ಷಣಾ ಪಡೆಯ ಮಹೇಶ್ ವಾಹನವನ್ನು ಜೆಎಸ್‌ಎಸ್ ವಿದ್ಯಾಪೀಠದ ಬಳಿ ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಚಂದನ್‌ನನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net