ಅಕ್ರಮವಾಗಿ ತಮಿಳುನಾಡಿಗೆ ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಗಳ ವಶ.

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಶನಿವಾರ ರಾತ್ರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ತಮಿಳುನಾಡಿಗೆ ಕಲ್ಲು ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಾಲೂರು ತಾಲ್ಲೂಕು ಗುಂಡ್ಲಪಾಳ್ಳ ಗ್ರಾಮದ ಬಳಿ ಅಕ್ರಮವಾಗಿ ಗಣಿಗಾರಿಕೆ ಮಾಡಿ ರಾತ್ರೋರಾತ್ರಿ ಕಲ್ಲು ಸಾಗಾಟ ಮಾಡುತ್ತಿದ್ದಾರೆಂಬ ಮಾಹಿತಿ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಕೋದಂಡರಾಮಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಕಲ್ಲು ತುಂಬಿದ್ದ ಮೂರು ಲಾರಿಗಳು ಮಾಸ್ತಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಚಿತ್ರ ಕೆ.ಎಲ್.ಆರ್. ೦೨ ಅಕ್ರಮವಾಗಿ ತಮಿಳುನಾಡಿಗೆ ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಕೋದಂಡರಾಮಯ್ಯ ನೇತೃತ್ವದ ತಂಡ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net