ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಆಕ್ರೋಶ

9 smg 3
ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಆರ್.ಪ್ರಸನ್ನಕುಮಾರ್ ಮಾತನಾಡಿದರು. ಎನ್.ರಮೇಶ್, ವಿಜಯಕುಮಾರ್, ಹರ್ಷಿತ್ ಗೌಡ, ಯಮುನಾ ರಂಗೇಗೌಡ, ಚರಣ್ ಇತರರಿದ್ದರು
Published on

ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ಜನಸಾಮಾನ್ಯರ ಮೇಲೆ ಪ್ರಹಾರ ನಡೆಸುತ್ತಿದೆ. ಎನ್‌ಡಿಎ ನೇತೃತ್ವದ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಗೋಪಿ ವೃತ್ತದಲ್ಲಿ ಕುದುರೆಯೊಂದಿಗೆ ಬುಧವಾರ ವಿನೂತನ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ಪದೇಪದೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಬದುಕಿಗೆ ಮಾರಕವಾಗಿ ಪರಿಣಮಿಸಿದೆ. ಜನಸಾಮಾನ್ಯರ ಮೇಲೆ ತೆರಿಗೆಯ ಅಧಿಕ ಹೊರೆ ಹೊರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ ಮಾತನಾಡಿ, ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಸಾಮಾನ್ಯ ಜನರು, ರೈತರು, ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಬೆಲೆ ಏರಿಕೆ ಹೊರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಾಲಿಕೆ ಮಾಜಿ ಸದಸ್ಯೆ ಯಮುನಾ ರಂಗೇಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ವಿಜಯ ಕುಮಾರ್ (ದನಿ), ಕಾನೂನು ಸಲಹೆಗಾರ ಪೂರ್ಣೇಶ್, ಯುವ ಕಾಂಗ್ರೆಸ್ ವಿಧಾನಸಭಾ ಅಧ್ಯಕ್ಷ ಚರಣ್, ಪ್ರವೀಣ್, ಗಿರೀಶ್, ಸಕ್ಲೇನ್, ಪ್ರವೀಣ್, ಶಶಿಕುಮಾರ್, ಅಬ್ದುಲ್ ಸತ್ತಾರ್, ಮಲವಗೊಪ್ಪ ಶಿವು, ಆಕಾಶ್, ಅಶೋಕ್, ಕಾಶಿಫ್ ಬಾಲಾಜಿ, ಧನರಾಜ್, ನಿಖಿಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net