ಅಗ್ನಿ ಅವಘಡದಿಂದ ಮನೆ ಭಸ್ಮ

22 bir 2 fire
ಬೀರೂರಿನ ಎ.ಡಿ.ಕಾಲನಿಯಲ್ಲಿ ಮನೆಯೊಂದಕ್ಕೆ ಅಗ್ನಿ ದುರಂತ ಸಂಭವಿಸಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವುದು.
Published on

ಬೀರೂರು: ಸರಸ್ವತಿಪುರಂ ಬಡಾವಣೆಯ ಎ.ಡಿ.ಕಾಲನಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆ ಸಂಪೂರ್ಣ ಭಸ್ಮವಾಗಿದೆ. ನಿವಾಸಿ ಶಿವಮ್ಮ ಎಂಬುವವರಿಗೆ ಸೇರಿದ ಮನೆಯಾಗಿದೆ. ಅಡುಗೆ ಮನೆಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್‌ಗೆ ಬೆಂಕಿಯ ಕೆನ್ನಾಲಿಗೆ ತಗುಲಿ ಭಾರಿ ಸ್ಫೋಟಗೊಂಡಿತ್ತು. ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net