ಅಧಿಕಾರಾವಧಿ ಪೂರ್ಣಕ್ಕೆ ಸಹಕರಿಸಲು ಸಿಎಂಗೆ ಮನವಿ

kdr cm manavi
ಬೆಂಗಳೂರಿನಲ್ಲಿ ವಿವಿಧ ಪುರಸಭೆ ಮತ್ತು ನಗರಸಭೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು. ಭಂಡಾರಿ ಶ್ರೀನಿವಾಸ್ ಇತರರಿದ್ದರು.
Published on

ಕಡೂರು: ಸ್ಥಳೀಯ ಸಂಸ್ಥೆಗಳು ಪೂರ್ಣಾವಧಿ ಅಧಿಕಾರ ನಡೆಸಲು ಕಾಲಾವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ವಿವಿಧ ನಗರಸಭೆ, ಪುರಸಭೆಗಳ ಅಧ್ಯಕ್ಷ-ಉಪಾಧ್ಯಕ್ಷರು ಮತ್ತು ಸದಸ್ಯರು ಗುರುವಾರ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.

ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಹೈಕೋರ್ಟ್‌ನಲ್ಲಿ ನಾವು ಸಲ್ಲಿಸಿದ್ದ ಅರ್ಜಿ ವಿಚಾರಣೆ ಗುರುವಾರ ನಡೆಯಿತು. ಅಧಿಕಾರಿಗಳು ಮೀಸಲಾತಿ ಕಲ್ಪಿಸುವಲ್ಲಿ ವಿಳಂಬ ಮಾಡಿದ್ದು ಏಕೆ ಎಂದು ನ್ಯಾಯಾಧೀಶರು ಪ್ರಶ್ನಿಸಿ ಅರ್ಜಿ ವಿಚಾರಣೆಯನ್ನು ಅ.25ಕ್ಕೆ ಮುಂದೂಡಿದ್ದಾರೆ. ನಂತರ ನವಲಗುಂದ ಶಾಸಕ ಎನ್.ಎಚ್.ಕೋನರಡ್ಡಿ ನೇತೃತ್ವದಲ್ಲಿ ನಾನು, ಬೀರೂರಿನ ಮೋಹನ್‌ಕುಮಾರ್, ಎನ್.ಆರ್.ಪುರದ ಜುಬೇದಾ, ಮೂಡಿಗೆರೆ ವೆಂಕಟೇಶ್ ಸೇರಿದಂತೆ ವಿವಿಧ ಪುರಸಭೆ, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಸಿಎಂಗೆ ಮನವಿ ಸಲ್ಲಿಸಿದೆವು. ನಮ್ಮಲ್ಲಿ ಬಹಳ ಮಂದಿ ಹಿಂದುಳಿದ ವರ್ಗಗಳನ್ನು ಪ್ರತಿನಿಧಿಸುತ್ತಿದ್ದು, ನಮ್ಮ 16 ತಿಂಗಳ ಅಧಿಕಾರಾವಧಿ ಮೊಟಕುಗೊಳಿಸಲಾಗುತ್ತಿದೆ. ಇದನ್ನು ತಪ್ಪಿಸಿ ನ್ಯಾಯ ದೊರೆಯಲು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ ಎಂದರು.

ಮನವಿ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಅಡ್ವೊಕೇಟ್ ಜನರಲ್ ಜತೆ ಮಾತನಾಡಿ, ಜನಪ್ರತಿನಿಧಿಗಳ ಹಕ್ಕು ಮೊಟಕುಗೊಳಿಸಲು ಬಿಡುವುದಿಲ್ಲ ಎನ್ನುವ ಭರವಸೆ ನೀಡಿದ್ದಾರೆ ಎಂದು ಹೇಳಿದರು. ಬಿ.ಆರ್.ಮೋಹನ್‌ಕುಮಾರ್, ಸೈಯದ್ ಯಾಸೀನ್, ಶಂಕರ್, ಮನು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net