ಅನುದಾನ ಸದ್ಬಳಕೆ ಮಾಡಿಕೊಳ್ಳಿ

bkt-18-1
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ೪ನೇ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ ಆಡತಾಽಕಾರಿ ಮೊಹ್ಮದ್ ಮೋಸಿನ್ ಮಾತನಾಡಿದರು. ಜಿಲ್ಲಾಽಕಾರಿ ಜಾನಕಿ ಕೆ.ಎಂ. ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಽಕಾರಿ ಸಿದ್ದರಾಮೇಶ್ವರ ಉಕ್ಕಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Published on

ಬಾಗಲಕೋಟೆ: ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ೨೦೨೪-೨೫ನೇ ಸಾಲಿನ ಆರ್ಥಿಕ ವರ್ಷ ಅಂತ್ಯವಾಗುವದರೊಳಗೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ ಆಡತಾಽಕಾರಿ ಮೊಹ್ಮದ್ ಮೋಸಿನ್ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ೪ನೇ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರ್ಥಿಕ ವರ್ಷ ಮುಗಿಯುವ ಮಾರ್ಚ ಅಂತ್ಯದೊಳಗೆ ಎಲ್ಲಾ ಇಲಾಖೆಗಳ ಮುಖ್ಯಸ್ಥರು ತಮಗೆ ನೀಡಿರುವ ವಿವಿಧ ಕಾಮಗಾರಿಗಳಿಗೆ ಬೇಕಾಗುವ ಅನುದಾನ, ಹೊರಗುತ್ತಿಗೆ ನೌಕರರಿಗೆ ಬೇಕಾಗುವ ಸಂಬಳದ ಅನುದಾನ ಸೇರಿದಂತೆ ಎಲ್ಲ ರೀತಿಯ ಅನುದಾನ ಖರ್ಚು ಮಾಡಬೇಕು. ಅನುದಾನ ಖರ್ಚು ಆಗದಿದ್ದಲ್ಲಿ ಬೇರೆ ಕಡೆ ವರ್ಗ ಆಗುವದರಿಂದ ಭೌತಿಕ ಪ್ರಗತಿ ಕುಂಠಿತಗೊಳ್ಳುತ್ತದೆ ಎಂದರು.

ಬರುವ ಫೆ.೨೨ ರಿಂದ ೨೪ ರವರೆಗೆ ರನ್ನ ವೈಭವ ಉತ್ಸವ ಹಾಗೂ ಮಾರ್ಚ ೧, ೨ ಮತ್ತು ೩ ರಂದು ಚಾಲುಕ್ಯ ಉತ್ಸವವನ್ನು ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಚರಿಸುತ್ತಿರುವುದು ಸಂತೋಷದ ವಿಷಯವಾಗಿದ್ದು, ಇನ್ನು ಮುಂದೆ ಪ್ರತಿ ವರ್ಷ ಒಂದು ನಿಽðಷ್ಟ ಪಡಿಸಿದ ದಿನಾಂಕದAದೇ ಉತ್ಸವಗಳನ್ನು ಆಚರಿಸಿದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದೂರದ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷೀಣ ಕರ್ನಾಟಕದ ಪ್ರವಾಸಿಗರನ್ನು ನಮ್ಮ ಬಾದಾಮಿ, ಪಟ್ಟದಕಲ್ಲು, ಐಹೊಳೆ ಮುಧೋಳದತ್ತ ಸೆಳೆಯಲು ಸಾಧ್ಯವಿದೆ ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ -Àಲಿತಾಂಶ ಒತ್ತು ನೀಡಬೇಕು. ಸತತ ಮೂರು ವರ್ಷಗಳ ಕಾಲ ಯಾವ ಯಾವ ಶಾಲೆಯಲ್ಲಿ ಒಂದೇ ವಿಷಯದಲ್ಲಿ ವಿದ್ಯಾರ್ಥಿಗಳು ಅನುತ್ತಿರ್ಣರಾಗುತ್ತಾರೆ ಎನ್ನುವುದು ತಿಳಿದು ಆ ವಿಷಯದ ಶಿಕ್ಷಕರಿಗೆ ತರಬೇತಿ ನೀಡಿ ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸಬೇಕು. ಪ್ರಮುಖವಾಗಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೆಂಟರ್‌ಗಳ ಕೊರರೆ ಇರುವುದು ಕಂಡು ಬಂದಿದೆ, ಔಷಽ ಪೂರೈಕೆ ವ್ಯತ್ಯಯ ಕುರಿತು ಸಮಸ್ಯೆ ಇದೆ. ಎಲ್ಲವನ್ನು ಗಮನಿಸಿ ಸರಿಪಡಿಸಬೇಕು. ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಹಾಸಿಗೆ ಹೊದಿಕೆ ನೀಡಿ ಸಮಸ್ಯೆ ನಿವಾರಿಸಬೇಕು. ಕೆಎಂಎಫ್‌ನ ಬಾಕಿ ಉಳಿಸಿಕೊಂಡ ಬಿಲ್‌ಗಳನ್ನು ಬಗೆಹರಿಸಬೇಕು ಎಂದು ಹೇಳಿದರು.

ತೋಟಗಾರಿಕೆ, ಕೃಷಿ, ರೇಷ್ಮೆ ಪಂಚಾಯತ್ ರಾಜ್, ಆಯುಷ್, ಪಶುಪಾಲನೆ ಸೇರಿದಂತೆ ವಿವಿಧ ಇಲಾಖೆಗಳ ಮಾಸಿಕ ಗುರಿಸಾಧನೆಗಳ ಕುರಿತು ಅಽಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ್ ಅವರೊಂದಿಗೆ ಚರ್ಚಿಸಿದರು.

ಸಭೆಯಲ್ಲಿ ಜಿಲ್ಲಾಽಕಾರಿ ಜಾನಕಿ ಕೆ.ಎಂ. ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಽಕಾರಿ ಸಿದ್ದರಾಮೇಶ್ವರ ಉಕ್ಕಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net