ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವು

death
Published on

ರಾಮದುರ್ಗ/ಅಥಣಿ ಗ್ರಾಮೀಣ: ಜಿಲ್ಲೆಯಲ್ಲಿ ಪ್ರತ್ಯೇಕ ಕಡೆ ಸಂಭವಿಸಿದ ಅಪಘಾತದಲ್ಲಿ ಓರ್ವ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.\

ರಾಮದುರ್ಗ ಪಟ್ಟಣದ ಜುನಿಪೇಟೆಯ ಮುಖ್ಯ ರಸ್ತೆಯಲ್ಲಿ ಸ್ಕೂಟರ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಲೂಕಿನ ಹಳೇತೊರಗಲ್ ಗ್ರಾಮದ ಗೀತಾ ಚಂದನಗೌಡ ಪಾಟೀಲ (26) ಸ್ಥಳದಲ್ಲೇ ಮೃತಪಟ್ಟರೆ, ಮೃತಳ ಮಗಳು ಸಮದ್ಧಿ, ಪತಿ ಚಂದನಗೆ ಸಣ್ಣಪುಟ್ಟ ಗಾಯಗಳಾಗಿವೆ. ಗೀತಾ 6 ತಿಂಗಳು ಗರ್ಭಿಣಿಯಾಗಿದ್ದು ಸ್ಕೂಟರ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಮುನವಳ್ಳಿಯಿಂದ ರಾಮದುರ್ಗ ಕಡೆಗೆ ಬರುತ್ತಿದ್ದ ಬಸ್ ಹಿಂಬದಿ ಡಿಕ್ಕಿ ಹೊಡೆದಿದೆ.

ಅಥಣಿ ತಾಲೂಕಿನ ಖೋತನಹಟ್ಟಿ ಕ್ರಾಸ್‌ನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಖೋತನಹಟ್ಟಿ ಗ್ರಾಮದ ಮಹಾನಂದಾ ಭರತ ಪವಾರ (42) ಮೃತಪಟ್ಟರೆ, ಈಕೆಯ ಪತಿ ಭರತ ಭಗವಂತ ಪವಾರ (54) ಗಾಯಗೊಂಡು ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ಮೇಲೆ ದಂಪತಿ ಅಥಣಿಯಿಂದ ಖೋತನಹಟ್ಟಿಗೆ ತೆರಳುತ್ತಿರುವಾಗ ವಿಜಯಪುರಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಈ ಅವಘಡವಾಗಿದೆ. ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net