ಅಪಘಾತದಲ್ಲಿ ಬೈಕ್ ಹಿಂಬದಿ ಸವಾರ ಸಾವು

14_HSN_HNP_PERUMAL
Published on

  • ಹಾಸನ : ಹೊಳೆನರಸೀಪುರ ಪಟ್ಟಣದ ಅರಕಲಗೂಡು ರಸ್ತೆಯಲ್ಲಿರುವ ಆರ್‌ಆರ್ ಡಾಬಾ ಸಮೀಪ ಗುರುವಾರ ರಾತ್ರಿ ಮಿನಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಮಿಳುನಾಡು ಮೂಲದ ಪೆರುಮಾಳ್ ಷಣ್ಮುಗಂ (25) ಮೃತರು.

  • ಬೈಕ್ ಚಾಲನೆ ಮಾಡುತ್ತಿದ್ದ ತಾಲೂಕು ಕಳ್ಳಿಕೊಪ್ಪಲು ಗ್ರಾಮದ ಕೃಷ್ಣ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಕಳ್ಳಿಕೊಪ್ಪಲು ಗ್ರಾಮದಲ್ಲಿ ನಡೆಯುತ್ತಿರುವ ಕೆಇಬಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಪೆರುಮಾಳ್ ಷಣ್ಮುಗಂ ಕೆಲಸದ ನಿಮಿತ್ತ ಹೊಳೆನರಸೀಪುರಕ್ಕೆ ಅದೇ ಗ್ರಾಮದ ಕೃಷ್ಣ ಎಂಬುವರ ಜತೆ ಬೈಕ್‌ನಲ್ಲಿ ಬಂದು ಗ್ರಾಮಕ್ಕೆ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ. ಹೊಳೆನರಸೀಪುರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net