ವಿಜಯವಾಣಿ ಸುದ್ದಿಜಾಲ ಕೋಲಾರ
ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ೬ ಜನ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಪ್ರಕರಣವೊಂದು ವೇಮಗಲ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬAಧ ೩ ಜನರನ್ನು ಕೋಲಾರ ಪೋಲಿಸರು ಬಂಧಿಸಿದ್ದಾರೆ.
ಬಾಲಕಿ ನೀಡಿದ ಹೇಳಿಕೆಯನ್ನು ಆಧರಿಸಿ ಜುಲೈ ೧೮ ರಂದು ಕೋಲಾರ ಮಹಿಳಾ ಪೋಲಿಸ್ ಠಾಣೆಯಲ್ಲಿ ೬ ಜನರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿತ್ತು. ಇವರನ್ನು ರಾಹುಲ್, ನಾಗೇಶ್, ಪುನೀತ್ ಎಂಬುವವರನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರೆಲ್ಲರು ೨೧ ವರ್ಷಕ್ಕೆ ಮೇಲ್ಪಟ್ಟವರಾಗಿದ್ದಾರೆ ಎನ್ನಲಾಗಿದೆ. ಉಳಿದಂತೆ ಚೇತನ್, ಕಿರಣ್, ಮಹೇಂದ್ರ ಎಂಬುವವರಿಗಾಗಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.
ಕಳೆದ ಒಂದು ತಿಂಗಳಿಗಿAತ ಹಿಂದೆಯೇ ಈ ಪ್ರಕರಣ ವೇಮಗಲ್ ಪೋಲಿಸ್ ಠಾಣೆಯ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದ್ದು, ಅಪ್ರಾಪ್ತ ಬಾಲಕಿ ಆಸ್ಪತ್ರೆಗೆ ತೆರಳಿದ ಸಂದರ್ಭದಲ್ಲಿ ವಿಷಯ ತಿಳಿದ ನಂತರ ಬಾಲಕಿ ಕೋಲಾರ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ ಎನ್ನಲಾಗಿದೆ.
ಈ ಪ್ರಕರಣ ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವಂತಾಗಿದೆ. ಆರೋಪಿಗಳೆಲ್ಲರೂ ಒಂದೇ ಗ್ರಾಮದವರು ಎನ್ನಲಾಗಿದ್ದು, ಬಾಲಕಿ ದೂರು ನೀಡಿದ ನಂತರ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರ ನಡೆಸಿದವರು ವಿವಿಧ ಸಮುದಾಯದವರು ಆಗಿದ್ದು, ಬೇರೆ ಬೇರೆ ರೀತಿಯ ಪ್ರಕರಣಗಳು ಆರೋಪಿಗಳ ವಿರುದ್ಧ ದಾಖಲಾಗಿದೆ ಎನ್ನಲಾಗಿದೆ.
ಚಿತ್ರ ೦೩ ಕೆ.ಎಲ್.ಆರ್. ೦೪ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಒಳಗಾಗಿರುವ ಬಂಧಿತ ಆರೋಪಿಗಳ ಭಾವಚಿತ್ರಗಳು