ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಯ ಸೆರೆ

ಪೊಲೀಸರ ವಶಕ್ಕೆ
ಪೊಲೀಸರ ವಶಕ್ಕೆ
Published on

ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಆರೋಪದಡಿ ಆರೋಪಿಯನ್ನು ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಡಿ.ಜೆ.ಹಳ್ಳಿ ನಿವಾಸಿ ಸಾದ್ ಮುಸಾದ್ (೨೦) ಬಂಧಿತ. ಆರೋಪಿಯು ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತೆಯನ್ನು ಪ್ರೀತಿಸುವುದಾಗಿ ನಂಬಿಸಿ, ಮನೆಗೆ ಕರೆದೊಯ್ದು ಹಲವು ಬಾರಿ ಅತ್ಯಾಚಾರ ಮಾಡಿದ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅಪ್ರಾಪ್ತೆಯನ್ನು ಪಾಲಕರು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿಸಿದಾಗ ಆಕೆ ಗರ್ಭಿಣಿ ಎಂಬುದು ಗೊತ್ತಾಗಿದೆ. ಈ ಸಂಬಂಧ ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪುತ್ರಿ ಗರ್ಭಿಣಿಯಾಗಿರುವ ವಿಚಾರ ತಿಳಿದ ಬಳಿಕ ತಂದೆ, ಆರೋಪಿಯ ಮನೆಗೆ ಪ್ರಶ್ನಿಸಲು ತೆರಳಿದ್ದಾರೆ. ಈ ವೇಳೆ ಆರೋಪಿಯು ಸಂತ್ರಸ್ತೆಯ ತಂದೆಗೆ ಜೀವ ಬೆದರಿಕೆ ಹಾಕಿರುವುದಲ್ಲದೇ ಹಲ್ಲೆ ಸಹ ಮಾಡಿದ್ದಾನೆ. ಆರೋಪಿಯು ಇದೇ ರೀತಿ ಹಲವು ಶಾಲಾ ಬಾಲಕಿಯರನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net