ಅಕ್ರಮವಾಗಿ ಸಾಗಿಸುತ್ತಿದ್ದ 25.380 ಲೀಟರ್ ಮದ್ಯ,46.800 ಲೀಟರ್ ಬಿಯರ್ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ಕಾರಿನ ಚಾಲಕ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಪಂಚಾಯತಿ ಚುನಾವಣಾ ಹಿನ್ನೆಲೆಯಲ್ಲಿ ಮಾಲೂರಿನ ಎಚ್.ಹೊಸಕೋಟೆ ಗ್ರಾಪಂ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಿಂದ ಹೊಸೂರಿಗೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಮದ್ಯ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಅಬಕಾರಿ ಉಪ ಆಯುಕ್ತ ಎ.ರವಿಶಂಕರ್ ನಿರ್ದೇಶನದ ಮೇರೆಗೆ ಉಪ ಅಧೀಕ್ಷಕ ಟಿ.ಗೋವಿಂದಪ್ಪ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಕಾರಿನಲ್ಲಿ ಅಕ್ರಮವಾಗಿ ಮಧ್ಯವನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ಗುರುವಾರ ದಿಢೀರ್ ಕಾರ್ಯಾಚರಣೆ ನಡೆಸಿ ಮದ್ಯ ವಶಪಡಿಸಿಕೊಂಡ ಘಟನೆ ಮಾಲೂರು-ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ.
ವಿಜಯವಾಣಿ ಸುದ್ದಿಜಾಲ ಕೋಲಾರ