

ಮೈಸೂರು: ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರಲಿರುವ ಅಭಿಮನ್ಯು ಮತ್ತು ಕಾವೇರಿ, ರೂಪಾ ಆನೆಗಳಿಗೆ ಸಚಿವ ಈಶ್ವರ ಖಂಡ್ರೆ ಪೂಜೆ ಸಲ್ಲಿಸಿದರು.
ಅರಮನೆ ಅಂಗಳದಲ್ಲಿನ ಕೋಡಿ ಸೋಮೇಶ್ವರ ದೇವಾಲಯ ಬಳಿ ಮೂರು ಆನೆಗಳಿಗೆ ಅರ್ಚಕ ಪ್ರಹ್ಲಾದ್ ರಾವ್ ಪೂಜೆ ಸಲ್ಲಿಸಿದರು. ಈ ವೇಳೆ ಸಚಿವರು ಕಬ್ಬು, ಬೆಲ್ಲ, ಹಣ್ಣುಗಳನ್ನು ಆನೆಗಳಿಗೆ ತಿನ್ನಿಸಿ ಆಶೀರ್ವಾದ ಪಡೆದರು.
ಇದಕ್ಕೂ ಮುನ್ನ ಆನೆ ಬಿಡಾರದತ್ತ ಆಗಮಿಸಿದ ಸಚಿವರಿಗೆ ಧನಂಜಯ, ಭೀಮ ಮತ್ತು ಏಕಲವ್ಯ ಆನೆಗಳು ಗೌರವ ಸಲ್ಲಿಸಿದವು. ಇದೇ ಮೊದಲ ಬಾರಿಗೆ ಅರಮನೆ ಅಂಗಳದಲ್ಲಿ ಅರಣ್ಯ ಸಚಿವರಿಗೆ ಇಲಾಖೆ ಸಿಬ್ಬಂದಿ ಗೌರವ ವಂದನೆ ಸಲ್ಲಿಸಿದರು.