ಅಭಿವೃದ್ಧಿ ಹೆಸರಲ್ಲಿ ಮರಗಳ ಹನನ

1686916406276
Published on

ಕಂಪಲಾಪುರ: ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿ ಹೆಸರಲ್ಲಿ ಮರಗಳ ಹನನ ಹೆಚ್ಚಾಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ನಿರ್ದೇಶಕಿ ಲೀಲಾವತಿ ತಿಳಿಸಿದರು.
ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಇಂದಿನಿಂದಲೇ ಎಲ್ಲರೂ ತಮ್ಮ ಮನೆ ಹಾಗೂ ಜಮೀನಿನ ಖಾಲಿ ಜಾಗದಲ್ಲಿ ಸಸಿಗಳನ್ನು ನೆಡಬೇಕು. ಗಿಡ-ಮರಗಿಡಗಳಿಂದ ನಮಗೆ ಉಸಿರಾಡಲು ಒಳ್ಳೆಯ ಗಾಳಿ ಸಿಗುತ್ತದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.
ತಾಲೂಕು ಯೋಜನಾಧಿಕಾರಿ ಸುರೇಶ್ ಶೆಟ್ಟಿ, ಗ್ರಾಪಂ ಅಧ್ಯಕ್ಷೆ ಶೀಲಾ ಮಂಜುನಾಥ್, ಮಾಜಿ ಅಧ್ಯಕ್ಷೆ ಮಮತಾ, ವೈದ್ಯೆ ಡಾ.ರಜಿತಾ, ಮುಖ್ಯಶಿಕ್ಷಕ ಕೃಷ್ಣಕುಮಾರ್, ವಲಯ ಮೇಲ್ವಿಚಾರಕಿ ರವಿಕಲಾಶೆಟ್ಟಿ, ಶಿಕ್ಷಕರು ಹಾಗೂ ಸೇವಾ ಪ್ರತಿನಿಧಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net