ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

application
Published on

ಚಿತ್ರದುರ್ಗ:ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿ ಆಯೋಜಿಸಲು ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮಾ.29 ರೊಳಗೆ ಮರು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯಥಿಗಳಿಗೆ ರಾಜ್ಯಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟಿಟ್ಯೂಟ್ ಹಾಗೂ ಬೆಂ ಗಳೂರಿನ ಇನ್ಸಿಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಮೂಲಕ ವಸತಿ ಸಹಿತ 5 ತಿಂಗಳ ಅವಧಿಯ ತರಬೇತಿ ಏರ್ಪಡಿಸಲು ಉದ್ದೇಶಿಸಲಾಗಿದೆ. 8ನೇ ತರಗತಿ ವಿದ್ಯಾರ್ಹತೆ ಹೊಂದಿರುವ 20- 45 ವರ್ಷ ವಯೋಮಿತಿಯೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾ.19ರಿಂದ ನಗರದ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾ ಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪ್ರವಾಸೋದ್ಯಮ ಇಲಾಖೆ ಕಚೇರಿ ದೂ ರವಾಣಿ ಸಂಖ್ಯೆ 08194-234466ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net