ವಿಜಯವಾಣಿ ಸುದ್ದಿಜಾಲ ಕೋಲಾರ
ಅಮರಶಿಲ್ಪಿ ಜಕಣಾಚಾರಿ ಅವರು ಶಿಲ್ಪ ಕಲೆಗೆ ಅಪಾರ ಕೊಡುಗೆ ನೀಡಿದ್ದು, ಸೂರ್ಯಚಂದ್ರ ಇರುವರೆಗೂ ಇವರ ಹೆಸರು ಅಮರವಾಗಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದರು.
ನಗರದ ಟಿ.ಚನ್ನಯ್ಯ ರಂಗಮAದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ, ಅಮರ ಶಿಲ್ಪಿ ಜಕಣಾಚಾರಿ ಅವರು ಸಂಸ್ಮರಣಾ ದಿನಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕನ್ನಡ ನಾಡಿನ ಇತಿಹಾಸದಲ್ಲಿ ಹೊಯ್ಸಳರು ತಮ್ಮದೇ ಆದ ಕೊಡುಗೆಯನ್ನು ಶಿಲ್ಪ ಕಲೆಗೆ ನೀಡಿದ್ದಾರೆ. ಇವರಲ್ಲಿ ವಿಷ್ಣುವರ್ಧನ ಅರಸನಕಾಲದಲ್ಲಿ ಕಲೆಯು ಉತ್ತುಂಗ ಶಿಖರದಲ್ಲಿತ್ತು. ವಿಷ್ಣುವರ್ಧನನ ಹೆಂಡತಿ ಶಾಂತಲೆ ನಾಟ್ಯ ರಾಣಿ ಎಂದು ಪ್ರಸಿದ್ಧಿಯಾಗಿದ್ದಳು. ಈ ಕಾಲದಲ್ಲಿದ್ದ ಅಮರಶಿಲ್ಪಿ ಜಕಣಾಚಾರಿ ಬೇಲೂರು ಹಳೇಬೀಡಿನ ಚನ್ನಕೇಶವ ದೇವಾಲಯದಲ್ಲಿ ಶಿಲ್ಪಗಳನ್ನು ಕೆತ್ತನೆ ಮಾಡಿ ಹೆಸರಾಗಿದ್ದಾರೆ ಎಂದರು.
ವಿಶ್ವಕರ್ಮ ಸಮುದಾಯದ ಮುಖಂಡರಾದ ಕಲಾವಿದ ವಿಷ್ಣು ಮಾತನಾಡಿ, ಒಳ್ಳೆಯ ಕೆಲಸ ಹಾಗೂ ಒಳ್ಳೆಯ ಸೇವೆ ಮಾಡಿದರೆ ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತೇವೆ. ಎಲ್ಲರೊಂದಿಗೆ ಸೌಹಾರ್ದತೆಯಿಂದ ಇರಬೇಕು. ವಿಶ್ವಕರ್ಮ ಸಮುದಾಯವು ಪಂಚ ಕಸುಬುಗಳನ್ನು ಅವಲಂಬಿಸಿದ್ದು, ಇವುಗಳನ್ನು ಜೀವಂತವಾಗಿ ಉಳಿಸಿಕೊಂಡುಹೋಗಬೇಕು ಎಂದರು.
ಇದೆ ಸಂದರ್ಭದಲ್ಲಿ ವಿಶಿಷ್ಟ ಸಾಧನೆಮಾಡಿರುವ ಸಾಧಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ಜಗದೀಶಚಾರಿ, ಹನುಮಂತಚಾರಿ, ಹರಿ, ಸರ್ವಜ್ಞ ಮೂರ್ತಿ ಸೇರಿದಂತೆ ಸಮಾಜದ ಮುಖಂಡರು, ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಚಿತ್ರ ೦೮ ಕೆ.ಎಲ್.ಆರ್. ೦೬ : ನಗರದ ಟಿ.ಚನ್ನಯ್ಯ ರಂಗಮAದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ, ಅಮರ ಶಿಲ್ಪಿ ಜಕಣಾಚಾರಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷಿö್ಮÃ ಮುಂತಾದವರಿದ್ದರು.