ಅರಣ್ಯ ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಚಟುವಟಿಕೆ ತಡೆಯಿರಿ

ಅರಣ್ಯ ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಚಟುವಟಿಕೆ ತಡೆಯಲು ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ರೀತಿ ಅಭಿವೃದ್ಧಿ ಕೆಲಸ ಕೈಗೆತ್ತಿಕೊಳ್ಳುವ ಮೊದಲು ಅಧಿಕಾರಿಗಳು ಪರಿಶೀಲಿಸಿ ಅನುಮತಿ ನೀಡಬೇಕು ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
forest meeting
ಸಭೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದರು. folder
Published on: 

ಬೆಂಗಳೂರು: ಅರಣ್ಯ ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಚಟುವಟಿಕೆ ತಡೆಯಲು ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ರೀತಿ ಅಭಿವೃದ್ಧಿ ಕೆಲಸ ಕೈಗೆತ್ತಿಕೊಳ್ಳುವ ಮೊದಲು ಅಧಿಕಾರಿಗಳು ಪರಿಶೀಲಿಸಿ ಅನುಮತಿ ನೀಡಬೇಕು ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ನಗರದ ಅರಣ್ಯ ಭವನದಲ್ಲಿ ನಡೆದ ರಾಜ್ಯ ವನ್ಯಜಿವಿ ಮಂಡಳಿಯ ಸ್ಥಾಯಿ ಸಮಿತಿ ಹಾಗೂ ಹುಲಿ ಸಂರತ ಪ್ರತಿಷ್ಠಾನ ಮತ್ತು ಕೊಡಗು ಮಾನವ ವನ್ಯಜಿವಿ ಸಂಘರ್ಷ ನಿವಾರಣಾ ಪ್ರತಿಷ್ಠಾನದ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದರು. ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಪ್ರವಾಸೋದ್ಯಮ ವಲಯಗಳನ್ನು ಸಂಪೂರ್ಣವಾಗಿ ಪ್ಲಾಸ್ಟಿಕ್​ ಮುಕ್ತಿಗೊಳಿಸಬೇಕು ಎಂದರು.

ಪ್ರವಾಸಿಗರು ಅರಣ್ಯ ಪ್ರವಾಸಿ ಸ್ಥಳಕ್ಕೆ ಪ್ರವೇಶಿಸುವ ದ್ವಾರದಲ್ಲೇ ತಪಾಸಣೆ ನಡೆಸಿ ಪ್ಲಾಸ್ಟಿಕ್​ ಇದ್ದರೆ ಸ್ಥಳಕ್ಕೆ ತೆಗೆದುಕೊಂಡು ಹೋಗದಂತೆ ಸೂಚಿಸಬೇಕು. ಸ್ಥಳಗಳಲ್ಲಿ ಸ್ವಚ್ಚತೆ ಕಾಪಾಡಲು ಸಲಹೆ ನೀಡಬೇಕು ಎಂದು ಸಲಹೆ ನೀಡಿದರು.

ರೆಸಾರ್ಟ್​, ಹೋಂಸ್ಟೆ, ವಾಣಿಜ್ಯ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು. ಸೂಕ್ಷ$್ಮ ವಲಯ ಪ್ರದೇಶದಲ್ಲಿ ಅಡಚಣೆಗಳನ್ನು ಕಡಿಮೆ ಮಾಡಬೇಕು. ಪರಿಸರ ಸೂಕ್ಷ್ಮ ವಲಯದ ಪ್ರದೇಶಗಳನ್ನು ಮೌನ ವಲಯದ ಪ್ರದೇಶಗಳೆಂದು ಘೋಷಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.

ವಿದ್ಯುತ್​, ಬಿಎಸ್​ಎನ್​ಎಲ್​ ಸ್ಯಾಚುರೇಶನ್​ ಟವರ್​, ಒಎ್​ಸಿ ಕೇಬಲ್​ ಸಣ್ಣ ಮತ್ತು ಸಂಪರ್ಕ ಸೇತುವೆ ನಿರ್ಮಾಣ, ಶೆಟ್ಟಿಹಳ್ಳಿ ವನ್ಯಜಿವಿಧಾಮ ಗಡಿಯನ್ನು ಸರಿಯಾಗಿ ಗುರುತಿಸದ ಕಾರಣ 1947ರ ಅಧಿಸೂಚನೆಯಲ್ಲಿ 395.608 ಚದರ ಕಿಮೀ ವಿಸ್ತೀರ್ಣವನ್ನು 25 ಅಧಿಸೂಚಿತ ಅರಣ್ಯ ಒಳಗೊಂಡಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದರೂ ಗಡಿ ಮರು ವಿಂಗಡಣೆ ಪ್ರಸ್ತಾವನೆಯನ್ನು ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ ಸ್ಥಾಯಿ ಸಮಿತಿಗೆ ಸಲ್ಲಿಸಲು ನಿರ್ಧರಿಸಲಾಯಿತು.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ಜೇಜ್​, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥೆ ಡಾ.ಮೀನಾ ನೇಗಿ, ಪ್ರಧಾನ ಕಾರ್ಯದರ್ಶಿ ಮನೋಜ್​ ಕುಮಾರ್​ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net