ಅರ್ಜಿಗಳ ವಿಲೇವಾರಿ ವಿಳಂಬವಾಗದಿರಲಿ; ಶಾಸಕ ವೆಂಕಟರಾವ ನಾಡಗೌಡ ತಾಕೀತು

21082022 Sindhanoor news
Published on

ಸಿಂಧನೂರು: ಸ್ಥಳದಲ್ಲಿ ವಿಲೇವಾರಿಯಾಗದ ಅರ್ಜಿಗಳನ್ನು ಒಂದು ವಾರದಲ್ಲಿ ವಿಲೇವಾರಿ ಮಾಡಿ, ಸಮಸ್ಯೆಗೆ ಪರಿಹಾರ ಕಲ್ಪಿಸುವ ಕೆಲಸವನ್ನು ತಾಲೂಕು ಆಡಳಿತ ಮಾಡಬೇಕೆಂದು ಶಾಸಕ ವೆಂಕಟರಾವ ನಾಡಗೌಡ ಹೇಳಿದರು.

ಜಂಗಮರಹಟ್ಟಿ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಕೆಲವು ಅರ್ಜಿಗಳು ಇತ್ಯರ್ಥಗೊಳ್ಳುತ್ತಿದ್ದು, ಬಾಕಿ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿರುವ ಬಗ್ಗೆ ದೂರುಗಳಿವೆ. ಇದಕ್ಕೆ ಅವಕಾಶ ಮಾಡಿಕೊಡಬಾರದು. ಜನರ ಯಾವುದೇ ಸಮಸ್ಯೆ ಇರಲಿ, ಬಗೆಹರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ತಹಸೀಲ್ದಾರ್ ಅರುಣ ದೇಸಾಯಿ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಸಲ್ಲಿಕೆಯಾದ ಅರ್ಜಿ ವಿಲೇವಾರಿ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಮಸ್ಯೆ ಇದ್ದರೆ ನೇರವಾಗಿ ಹೇಳಿಕೊಂಡು ಪರಿಹಾರ ಪಡೆಯಬಹುದಾಗಿದೆ. ಗ್ರಾಮ ವ್ಯಾಪ್ತಿಯಲ್ಲಿ ಸರ್ಕಾರದ ಯೋಜನೆಗಳು ನನೆಗುದಿಗೆ ಬಿದ್ದಿದ್ದರೆ, ರಸ್ತೆ ಇತರ ಸಮಸ್ಯೆಗಳಿದ್ದರೆ ಅರ್ಜಿ ಸಲ್ಲಿಸಬಹುದು. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಪರಿಹಾರ ಕಲ್ಪಿಸಲಾಗುವುದು ಎಂದರು.

ಲೋಕೋಪಯೋಗಿ ಇಲಾಖೆ ಎಇಇ ಸಿ.ಎಸ್.ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಶರಣಪ್ಪ ವಟಗಲ್, ತಾಲೂಕು ಆರೋಗ್ಯಾಧಿಕಾರಿ ಅಯ್ಯನಗೌಡ, ಜವಳಗೇರಾ ಗ್ರಾಪಂ ಅಧ್ಯಕ್ಷೆ ಅಮರಮ್ಮ, ಉಪಾಧ್ಯಕ್ಷ ನಾಗಮ್ಮ ಹನುಮಂತಪ್ಪ, ತೋಟಗಾರಿಗೆ ಇಲಾಖೆಯ ಬಸವರಾಜ, ಎಪಿಎಂಸಿ ಕಾರ್ಯದರ್ಶಿ ಅಲ್ಲಾಭಕ್ಷಿ, ಕೃಷಿ ಇಲಾಖೆ ಅಧಿಕಾರಿ ಡಾ.ಪ್ರಿಯಾಂಕಾ, ಡಾ.ಶರಣೇಗೌಡ, ತಾಪಂ ಪ್ರಭಾರ ಇಒ ಅಮರಗುಂಡಪ್ಪ, ಆರ್‌ಐ ಹನುಮಂತಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net