

ಬೆಂಗಳೂರು
ಹೊರ ರಾಜ್ಯಗಳಿಂದ ಬಂದು 2020-21ನೇ ಸಾಲಿಗೆ 12ನೇ ತರಗತಿ ವ್ಯಾಸಂಗ ಮುಂದುವರಿಸಲು ಇಚ್ಛಿಸುವ ಎಲ್ಲ ವಿದ್ಯಾರ್ಥಿಗಳಿಗೆ ಕಾಲೇಜು ಬದಲಾವಣೆ ಹಾಗೂ ಅರ್ಹತಾ ಪತ್ರದ ಶುಲ್ಕ ವಿನಾಯತಿ ನೀಡಲಾಗುತ್ತದೆ.
ಪ್ರಸಕ್ತ ಸಾಲಿನಲ್ಲಿ ಕರೊನಾ ವಿಷಮ ಪರಿಸ್ಥಿತಿ ಇರುವುದರಿಂದ ಮತ್ತು ಕರೊನಾದಿಂದಾಗಿ ಹಲವು ರೀತಿಯ ವಿಶಿಷ್ಟ ಸನ್ನಿವೇಶ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ 2020-21ನೇ ಸಾಲಿಗೆ ಮಾತ್ರ ಅನ್ವಯಿಸುವಂತೆ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದು ಇಲ್ಲಿ 12ನೇ ತರಗತಿ ವ್ಯಾಸಂಗ ಮುಂದುವರಿಸಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಕಾಲೇಜು ಬದಲಾವಣೆ ಮತ್ತು ಅರ್ಹತಾ ಪತ್ರದ ಶುಲ್ಕ ವಿನಾಯತಿ ನೀಡಲಾಗಿದೆ. ಆದರೆ ಈ ಹಿಂದೆ ಈ ವಿಷಯವಾಗಿ ಚಲನ್ ಮೂಲಕ ಸರ್ಕಾರಕ್ಕೆ ಪಾವತಿಸಿರುವ ಹಣವನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.