ಅಸಹನೆ ಸಾಬೀತುಗೊಂಡಿದೆ: ಡಾ.ಬಿ.ಜೆ.ವಿಜಯ್ ಕುಮಾರ್

dr b j vijayakumar
Published on

ಕರ್ನಾಟಕದಲ್ಲಿ ಬಹುಮತದ ಕಾಂಗ್ರೆಸ್ ಸರ್ಕಾರ ಇರುವ ಕಾರಣಕ್ಕಾಗಿ ಬಜೆಟ್‌ನಲ್ಲಿ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಅಸಹನೆ ಸಾಬೀತು ಗೊಂಡಿದೆ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ತಿಳಿಸಿದ್ದಾರೆ.

ದೇಶದ ಸಂಪನ್ಮೂಲವನ್ನು ವೈಜ್ಞಾನಿಕವಾಗಿ ಹಂಚಿಕೆ ಮಾಡುವ ವಿಚಾರದಲ್ಲಿ ರಾಜಕಾರಣವನ್ನೇ ಕೇಂದ್ರೀಕರಿಸಿದೆ. 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ ವಿಶೇಷ ಒಟ್ಟು ಅನುದಾನ 11,950 ಕೋಟಿ ರೂ. ವಿಚಾರದಲ್ಲಿ ವಿಫಲತೆ ಕಂಡಿದೆ. ಕರ್ನಾಟಕದ ಮಹಾಜನತೆ ಕುಡಿಯುವ ನೀರು ಹಾಗೂ ಕೃಷಿ ಕ್ಷೇತ್ರದ ಮಹದಾಯಿ, ಭದ್ರಾ ಮೇಲ್ದಂಡೆ, ಕಳಸ ಬಂಡೂರಿ, ಮೇಕೆದಾಟು ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮುಂದುವರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net