

ಆಕಾಶವಾಣಿ ಮೈಸೂರು ಕೇಂದ್ರದಲ್ಲಿ ಸಾಂದರ್ಭಿಕ ಉದ್ಘೋಷಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 20 ವರ್ಷ ವಯಸ್ಸಾಗಿರಬೇಕು, ಆಸಕ್ತ ಅಭ್ಯರ್ಥಿಗಳು ಅರ್ಜಿ ಫಾರ್ಮ್ ನ್ನು ಕೆಲಸದ ದಿನಗಳಲ್ಲಿ ಮೈಸೂರಿನ ಆಕಾಶವಾಣಿಯಲ್ಲಿ ಪಡೆಯಬಹುದಾಗಿದೆ. ಧ್ವನಿ ಪರೀಕ್ಷೆಯ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂಪಾಯಿ ಹಾಗೂ ಸೇವಾ ಶುಲ್ಕ ಪರಿಶಿಷ್ಟ ಜಾತಿ ಪಂಗಡದ ಅಭ್ಯರ್ಥಿಗಳಿಗೆ 225 ರೂಪಾಯಿ ಸೇವಾ ಶುಲ್ಕವನ್ನು ವಿಧಿಸಲಾಗಿದ್ದು, ಅರ್ಜಿ ಸಲ್ಲಿಸುವವರು ಅಧಿಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ವಾಸಿಸುವವರಾಗಿರಬೇಕು. ಮೈಸೂರು ನಗರದಲ್ಲಿ ವಾಸಿಸುವವರಿಗೆ ಆದ್ಯತೆ ನೀಡಲಾಗುತ್ತದೆ. ಕನ್ನಡ ಭಾಷೆ ಸ್ಪಷ್ಟ ಉಚ್ಚಾರಣೆ, ಸಾಹಿತ್ಯ, ಸಂಗೀತ, ಕಲೆ, ಸಂಸ್ಕೃತಿಯ ಪರಿಜ್ಞಾನ, ದೈನಂದಿನ ಆಗುಹೋಗುಗಳ ಬಗ್ಗೆ ತಿಳುವಳಿಕೆ ಅತ್ಯವಶ್ಯಕವಾಗಿದ್ದು, ಇಂಗ್ಲೀಷ್ ಭಾಷೆಯ ಜ್ಞಾನ, ಕಂಪ್ಯೂಟರ್ ಜ್ಞಾನ ಮತ್ತು ಕಂಪ್ಯೂಟರ್ ನಲ್ಲಿ ಕಾರ್ಯಕ್ರಮ ಸಿದ್ಧಪಡಿಸುವ ಕೌಶಲ್ಯವನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಮೇ 02 ಕೊನೆಯ ದಿನಾಂಕವಾಗಿದ್ದು ಭರ್ತಿ ಮಾಡಿದ ಅರ್ಜಿಯ ಜೊತೆಗೆ ಧ್ವನಿ ಪರೀಕ್ಷೆಯ ಶುಲ್ಕವನ್ನು ಸೇರಿ ಮೈಸೂರಿನ ಯಾದವಗಿರಿಯಲ್ಲಿರುವ ಆಕಾಶವಾಣಿಯ ಸಾಂದರ್ಭಿಕ ವಿದ್ಘೋಷಕರ ವಿಭಾಗದ ಕೇಂದ್ರ ನಿರ್ದೇಶಕರಿಗೆ ಸಲ್ಲಿಸಬೇಕು ಎಂದು ಆಕಾಶವಾಣಿಯ ಉಪ ನಿರ್ದೇಶಕರಾದ ಉಮೇಶ್ ಎಸ್.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.