

ಆಗಸ್ಟ್ 15 ರಂದು ಆಚರಿಸುಲ್ಪಡುವ ಸ್ವಾತಂತ್ರ್ಯ ದಿನಾಚರಣೆ ಸಂಬoಧ ಬೆಳಗ್ಗೆ 09 ಗಂಟೆಗೆ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಿಸುವ ಕಾರ್ಯಕ್ರಮ ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಹಾಗೂ ಅಂದು ಸಂಜೆ 06 ಗಂಟೆಗೆ ಕಲಾಮಂದಿರದಲ್ಲಿ ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲು ಕೋರಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯ ಸಂಬoಧ ಪ್ಲಾಸ್ಟಿಕ್ ಧ್ವಜದ ಬಳಕೆ ನಿಷೇಧ:- ಸ್ವಾತಂತ್ರ್ಯದಿನಾಚರಣೆಯ ಸಂದರ್ಭದಲ್ಲಿ, ಪ್ಲಾಸ್ಟಿಕ್ ಮತ್ತು ಕಾಗದದ ರಾಷ್ಟ್ರಧ್ವಜವನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಳಸುತ್ತಿದ್ದು, (ಪ್ರದರ್ಶನ ಮತ್ತು ಹಾರಾಟ) ಸೂಕ್ತ ರೀತಿಯಲ್ಲಿ ಬಳಸದೇ ಇರುವುದರಿಂದ ರಾಷ್ಟçಧ್ವಜಕ್ಕೆ ಅಗೌರವ, ಅಪಮಾನವಾಗುವುದರಿಂದ ಅದನ್ನು ತಪ್ಪಿಸುವ ಉದ್ದೇಶದಿಂದ ಪ್ಲಾಸ್ಟಿಕ್ /ಕಾಗದದ ರಾಷ್ಟ್ರಧ್ವಜವನ್ನು ಬಳಸದಿರಲು, ಎಲ್ಲರೂ ಬಟ್ಟೆಯ ಧ್ವಜವನ್ನು ಬಳಸಲು, ವ್ಯಾಪಾರಸ್ಥರು ಸಹ ಪ್ಲಾಸ್ಟಿಕ್ ಮತ್ತು ಕಾಗದದ ರಾಷ್ಟ್ರಧ್ವಜವನ್ನು ಮಾರಾಟ ಮಾಡದಂತೆ ಸಂಬoಧಪಟ್ಟವರಿಗೆ ನಿರ್ದೇಶನ ನೀಡಲಾಗಿದೆ ಎಂದು ಮೈಸೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.