ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಸಚಿವ ಬಿ.ಸಿ.ಪಾಟೀಲ್

3 gkp 01
Published on

ಯಾರೇ ಆತ್ಮಹತ್ಯೆ ಮಾಡಿಕೊಂಡರೂ ಅವು ಹೇಡಿಗಳ ಕೆಲಸ. ಸರ್ಕಾರ ಸದಾ ರೈತರ ನೆರವಿಗೆ ಬದ್ದವಾಗಿದೆ. ಯಾರೂ ಸಮಸ್ಯೆಗಳಿಗೆ ಹೆದರಬೇಕಾಗಿಲ್ಲ ಎಂದು ಪಾಟೀಲ್ ಭರವಸೆ ನೀಡಿದರು.

ಭೂಮಿಯನ್ನು ನಂಬಿಕೊಂಡು ಜೀವನದಲ್ಲಿ ಮುಂದೆ ಬಂದ ಅನೇಕರು ನಮ್ಮ ಮುಂದಿದ್ದಾರೆ. ಹೀಗಿರುವಾಗ ಸಮಸ್ಯೆ ಇದೆ ಎಂದು ಸಾವಿಗೆ ಶರಣಾಗುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಈಸಬೇಕು, ಇದ್ದು ಜಯಿಸಬೇಕು ಎಂದು ಸಂದೇಶ ಸಾರಿದರು.

ಸಮಸ್ಯೆಗಳಲ್ಲಿ ಸಿಲುಕಿರುವ ರೈತರು ಶ್ರಮವಹಿಸಿ ಸಮಸ್ಯೆಗಳ ಸುಳಿಯಿಂದ ಹೊರಬರುವಂತಾಗಬೇಕು. ಅದು ಬಿಟ್ಟು ಹೇಡಿಗಳಂತೆ ಸಾವಿಗೆ ಶರಣಾಗಬಾರದು. ಹೆಂಡತಿ, ಮಕ್ಕಳನ್ನು ನೋಡಿಕೊಳ್ಳಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವಾತ ಹೇಡಿ ಎಂದರು.

ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಶಿವಮೊಗ್ಗ ಕೃಷಿ ವಿವಿ ವತಿಯಿಂದ ರಾಷ್ಟ್ರೀಯ ಕೃಷಿ ಶಿಕ್ಷಣ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಬಿದಿರು ಸಂಪನ್ಮೂಲಗಳ ಕೇಂದ್ರ ಉದ್ಘಾಟನೆ ಮತ್ತು ಬಿದಿರು ನರ್ಸರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಮಡಿಕೇರಿ: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net