ಆಯ ತಪ್ಪಿ ಬಿದ್ದು ಬೈಕ್ ಸವಾರ ಸಾವು

Crime Logo
Published on

ಕೆಆರ್‌ಎಸ್ ರಸ್ತೆಯ ರಾಯಲ್ ಇನ್ ಜಂಕ್ಷನ್ ಬಳಿ ಚಾಲನೆ ವೇಳೆ ಆಯ ತಪ್ಪಿ ಕೆಳಗೆ ಬಿದ್ದು ಬೈಕ್ ಸವಾರ ಮೃತಪಟ್ಟಿದ್ದಾರೆ.

ಬೆಲವತ್ತ ಗ್ರಾಮದ ನಿವಾಸಿ ಎನ್.ಮೋಹನ್ (35) ಮೃತರು. ಶುಕ್ರವಾರ ಸಂಜೆ ಮೋಹನ್ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ವಿವಿಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net