ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಆಕ್ಷೇಪಣೆಗಳ ಆಹ್ವಾನ

Application
Published on

ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಎನ್.ಪಿ-ಎನ್.ಸಿ.ಡಿ, ಎನ್.ಪಿ.ಹೆಚ್.ಸಿ.ಇ, ಎನ್.ಪಿ.ಪಿ.ಸಿ ಮತ್ತು ಐ.ಡಿ.ಎಸ್.ಪಿ (ಬಿ.ಪಿ.ಹೆಚ್.ಯು) ಕಾರ್ಯಕ್ರಮಗಳ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ದಿನಾಂಕ: 02.12.2024 ರಂದು ನಡೆಸಲಾದ ನೇರ ಸಂದರ್ಶನದಲ್ಲಿ ಹಾಜರಾದ ವಿವಿಧ ವೃಂದದ ಹುದ್ದೆಗಳಾದ ತಜ್ಞವೈದ್ಯರು, ಪೂರ್ಣಕಾಲಿಕ ವೈದ್ಯರು, ಶುಶ್ರೂಷಣಾಧಿಕಾರಿಗಳು, ಎಪಿಡಮಾಲಾಜಿಸ್ಟ್ ಮತ್ತು ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗಳಿಗೆ ನೇರ ಸಂದರ್ಶನದಲ್ಲಿ ಹಾಜರಾದ ಅಭ್ಯರ್ಥಿಗಳ ಅರ್ಜಿಗಳಲ್ಲಿ ನಿಯಮಾನುಸಾರ ಮೆರಿಟ್ ಕಂ ರೋಸ್ಟರ್ ಅನ್ವಯ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ನೋಟೀಸ್ ಬೋರ್ಡ್ನಲ್ಲಿ ಪ್ರಕಟಿಸಲಾಗಿದೆ.

 ಈ ಸಂಬoಧ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಆಕ್ಷೇಪಣೆಗಳು ಇದ್ದಲ್ಲಿ ಜುಲೈ 11 ರಿಂದ ಜುಲೈ 19 ರೊಳಗೆ ಕಛೇರಿ ಸಮಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಮೈಸೂರು ಇಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಜಿಲ್ಲಾ ಕಾರ್ಯಕ್ರಮಾದಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net