ಆರೋಗ್ಯ ಸಚಿವ ಶ್ರೀರಾಮುಲು ಜಿಲ್ಲಾ ಪ್ರವಾಸ ಇಂದು

Published on

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಏ.8 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಳಗ್ಗೆ 11 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವ ಸಚಿವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಣ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಶೀಲನೆ ಮಾಡುವರು.

ಮಧ್ಯಾಹ್ನ 12.15ಕ್ಕೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸುವರು. ಮಧ್ಯಾಹ್ನ 1 ಗಂಟೆಗೆ ಮೈಸೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net